ಪೀಠವನ್ನು ಅಭಿವೃದ್ಧಿಗೆ ಕೊಂಡೊಯ್ದ ರಂಭಾಪುರಿ ಶ್ರೀ

rambhapuri
ಬಾಳೆಹೊನ್ನೂರಿನ ಜಗದ್ಗುರು ರೇಣುಕಾಚಾರ್ಯ ಐಟಿಐ ಕಾಲೇಜಿನಲ್ಲಿ ರಂಭಾಪುರಿ ಜಗದ್ಗುರುಗಳ ಜನ್ಮದಿನವನ್ನು ಆಚರಿಸಲಾಯಿತು. ಎಚ್.ಆರ್.ಆನಂದ್, ಉಮೇಶ್, ಮಲ್ಲಿಕಾರ್ಜುನ, ಚಂದ್ರಶೇಖರ್, ಶ್ರೀನಿವಾಶ್, ಪ್ರಕಾಶ್ ಇದ್ದರು.
Published on

ಬಾಳೆಹೊನ್ನೂರು: ರಂಭಾಪುರಿ ಡಾ. ಶ್ರೀ ವೀರಸೋಮೇಶ್ವರ ಜಗದ್ಗುರು ಪೀಠಾರೋಹಣ ಮಾಡಿದ ಬಳಿಕ ಪೀಠವನ್ನು ಅಭಿವೃದ್ಧಿ ಪಥಕ್ಕೆ ಕೊಂಡೊಯ್ದಿದ್ದಾರೆ ಎಂದು ಜಗದ್ಗುರು ರೇಣುಕಾಚಾರ್ಯ ಐಟಿಐ ಕಾಲೇಜು ಪ್ರಾಚಾರ್ಯ ಎಚ್.ಆರ್.ಆನಂದ್ ಹೇಳಿದರು.

ರೇಣುಕನಗರದ ಜಗದ್ಗುರು ರೇಣುಕಾಚಾರ್ಯ ಐಟಿಐ ಕಾಲೇಜಿನಲ್ಲಿ ಸೋಮವಾರ ಆಯೋಜಿಸಿದ್ದ ರಂಭಾಪುರಿ ಜಗದ್ಗುರುಗಳ 68ನೇ ಜನ್ಮ ವರ್ಧಂತಿ ಮಹೋತ್ಸವದಲ್ಲಿ ಮಾತನಾಡಿದ ಅವರು, ಸಾಹಿತ್ಯ, ಸಂಸ್ಕೃತಿ ಸಂವರ್ಧಿಸಲಿ. ಶಾಂತಿ, ಸಮೃದ್ಧಿ ಸರ್ವರಿಗಾಗಲಿ ಎಂಬ ಘೋಷವಾಕ್ಯದಂತೆ ರಂಭಾಪುರಿ ಜಗದ್ಗುರುಗಳು ಪೀಠವನ್ನು ಅಭಿವೃದ್ಧಿಯ ಉತ್ತುಂಗಕ್ಕೆ ಕೊಂಡೊಯ್ದು ಕೀರ್ತಿಯನ್ನು ಶಿಖರಕ್ಕೆ ಏರಿಸಿದ್ದಾರೆ ಎಂದರು.
ಶ್ರೀಪೀಠದಲ್ಲಿ ಅಕ್ಷರ, ಅನ್ನ ದಾಸೋಹ ನಿರಂತರವಾಗಿ ನಡೆಯುತ್ತಿದ್ದು, ಜಗದ್ಗುರುಗಳು ತ್ರಿವಿಧ ದಾಸೋಹಿಗಳಾಗಿದ್ದಾರೆ. ಮಲೆನಾಡಿನ ಗ್ರಾಮೀಣ ಪ್ರದೇಶದ ಯುವಕರಿಗಾಗಿ ಜಗದ್ಗುರು ರೇಣುಕಾಚಾರ್ಯ ಐಟಿಐ ಸಂಸ್ಥೆಯನ್ನು ಉನ್ನತ ದರ್ಜೆಗೆ ಏರಿಸಲಾಗಿದೆ. ಯುವಕರಿಗೆ ನಿರುದ್ಯೋಗ ಸಮಸ್ಯೆ ಕಾಡಬಾರದು ಎಂಬ ಸದುದ್ದೇಶದಿಂದ ಐಟಿಐ ಸಂಸ್ಥೆಯಲ್ಲಿ ಗುಣಮಟ್ಟದ ತರಬೇತಿ ನೀಡಿ, ಉದ್ಯೋಗವನ್ನೂ ಕೊಡಿಸಲಾಗುತ್ತಿದೆ ಎಂದು ಹೇಳಿದರು.
ಜಗದ್ಗುರುಗಳ ಜನ್ಮದಿನಾಚರಣೆ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಶಿಕ್ಷಕ ಉಮೇಶ್, ಮಲ್ಲಿಕಾರ್ಜುನ, ಚಂದ್ರಶೇಖರ್, ಶ್ರೀನಿವಾಸ್, ಪ್ರಕಾಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net