

ಪಶ್ಚಿಮ ಬಂಗಾಳ: ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ಟ್ರೈನಿ ವೈದ್ಯೆಯ ಮೇಲೆ ನಡೆದ ಭೀಕರ ಅತ್ಯಾಚಾರ ಹಾಗೂ ಹತ್ಯೆ ಘಟನೆಯನ್ನು ಖಂಡಿಸಿ ಬೃಹತ್ ಪ್ರತಿಭಟನೆ ಕೈಗೊಂಡಿರುವ ವೈದ್ಯಕೀಯ ಸಿಬ್ಬಂದಿ, ಆರೋಪಿಗಳ ವಿರುದ್ಧದ ಹೋರಾಟವನ್ನು ನಿರಂತರವಾಗಿ ಮುಂದುವರೆಸಿದ್ದಾರೆ. ಆಗಸ್ಟ್ 16ರಂದು 24 ಗಂಟೆಗಳ ಕಾಲ ದೇಶವ್ಯಾಪಿ ಮೆಡಿಕಲ್ ಸೇವೆಯನ್ನು ಸ್ಥಗಿತಗೊಳಿಸುವ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ತಮ್ಮ ಸಮಸ್ಯೆಯನ್ನು ಒತ್ತಿ ಹೇಳಿದ ಮಹಿಳಾ ವೈದ್ಯರು, ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದಾರೆ.
ಇದನ್ನೂ ಓದಿ: ಹಿಮೋಗ್ಲೋಬಿನ್ ಪರಿಮಾಣದ ಪರೀಕ್ಷೆ
ಇನ್ನು ಪ್ರಕರಣವನ್ನು ಆ.14ರಂದು ಸಿಬಿಐಗೆ ವಹಿಸಿದ ಕೊಲ್ಕತ್ತಾ ಹೈಕೋರ್ಟ್, ತನಿಖೆಯನ್ನು ಚುರುಕುಗೊಳಿಸುವಂತೆ ಆದೇಶಿಸಿತು. ಈ ವಿಷಯವನ್ನು ಇದೀಗ ಮುನ್ನೆಲೆಗೆ ತಂದಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಪಕ್ಷ, ಕೇಸ್ ವಹಿಸಿಕೊಂಡು ಐದು ದಿನಗಳಾದರೂ ಇಲ್ಲಿಯವರೆಗೆ ಒಂದೇ ಒಂದು ಮಾಹಿತಿ ಲಭ್ಯವಾಗದೆ ಇರುವುದು ದುರಾದೃಷ್ಟಕರ. ಈ ವಿಷಯಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ಏಕೆ ಧ್ವನಿ ಎತ್ತುತ್ತಿಲ್ಲ? ಸಿಬಿಐ ತನಿಖೆ ಬಗ್ಗೆ ಯಾಕೆ ಮಾಹಿತಿ ಪಡೆದಿಲ್ಲ ಎಂದು ಪರೋಕ್ಷವಾಗಿ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ್ದಾರೆ.
"ಆರ್‌ಜಿ ಕರ್ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ನಡೆದ ಟ್ರೈನಿ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣವನ್ನು ಕೋರ್ಟ್ ಸಿಬಿಐಗೆ ವಹಿಸಿದ್ದು ಆಗಸ್ಟ್ 14 ರಂದು. ಈ ಕೇಸ್ನ ಹಸ್ತಾಂತರಿಸಿ ಇಂದಿಗೆ ಐದು ದಿನಗಳು ಕಳೆದಿವೆ. ಆದ್ರೆ, ಸಿಬಿಐನಿಂದ ಇಲ್ಲಿಯವರೆಗೂ ಒಂದೇ ಒಂದು ಅಪ್‌ಡೇಟ್ ಕೂಡ ಬಂದಿಲ್ಲ. ಅದಲ್ಲದೆ, ಪ್ರಕರಣದಲ್ಲಿ ಕೊಲ್ಕತ್ತಾ ಪೊಲೀಸರು ಆರೋಪಿಯನ್ನು ಮಾತ್ರ ಅರೆಸ್ಟ್ ಮಾಡಿದ್ದಾರೆಯೇ ವಿನಃ ಹಲವು ಶಂಕಿತರನ್ನು ಇನ್ನೂ ವಿಚಾರಣೆಗೆ ಒಳಪಡಿಸಿಲ್ಲ" ಎಂದು ಟಿಎಂಸಿ ನಾಯಕಿ, ರಾಜ್ಯಸಭಾ ಸಂಸದೆ ಸಾಗರಿಕಾ ಘೋಷ್ ವಿಡಿಯೋ ಮೂಲಕ ಕಿಡಿಕಾರಿದ್ದಾರೆ,(ಏಜೆನ್ಸೀಸ್).