ಬಿಟ್ಟಿ ಭಾಗ್ಯಗಳೆಂದು ಹೀಗಳೆವ ಮಂದಿಗೆ ತಪರಾಕಿ ಬಾರಿಸಿದಂತೆ...!

Siddaramaiah_0
ಸಿದ್ದರಾಮಯ್ಯ
Published on

ಬೆಂಗಳೂರು: ದ್ವಿತೀಯ ಪಿಯುಸಿಯ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿರುವ ವಿಜಯಪುರದ ಹುಡುಗ ತನ್ನ ಕುಟುಂಬದ ಹಿನ್ನೆಲೆ ವಿವರಿಸುತ್ತಾ ಬಡತನದಲ್ಲೇ ಶಿಕ್ಷಣ ಪಡೆಯುತ್ತಿರುವ ತನಗೆ ಗೃಹಲಕ್ಷ್ಮಿ ಯೋಜನೆಯ ಹಣದಿಂದ ಅನುಕೂಲವಾಯಿತು ಎಂದಿದ್ದನ್ನು ಕೇಳಿ ಖುಷಿಯಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬಡತನ ನಾಡಿನ ಮಕ್ಕಳ ಕಲಿಕಾ ಸಾಧನೆಗೆ ಅಡ್ಡಿಯಾಗಬಾರದು, ಅಂತಹ ವ್ಯವಸ್ಥೆಯೊಂದನ್ನು ನಿರ್ಮಾಣ ಮಾಡಬೇಕು ಎಂಬುದು ನನ್ನ ಕನಸಾಗಿತ್ತು. ಗೃಹಲಕ್ಷ್ಮಿ ಆ ಕನಸನ್ನು ಸಾಕಾರಗೊಳಿಸಿದೆ ಎಂದಿದ್ದಾರೆ.

ನಮ್ಮ ಸರ್ಕಾರದ ಕಾರ್ಯಕ್ರಮವೊಂದು ನಿರೀಕ್ಷೆಗೂ ಮೀರಿದ್ದನ್ನು ಸಾಧಿಸಿದೆ. ಗ್ಯಾರಂಟಿ ಯೋಜನೆಗಳನ್ನು ಬಿಟ್ಟಿ ಭಾಗ್ಯಗಳೆಂದು ಹೀಗಳೆವ ಮಂದಿಗೆ ಇದು ತಪರಾಕಿ ಬಾರಿಸಿದಂತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net