

ಚಿಕ್ಕಮಗಳೂರು: ಮಾಜಿ ಸಚಿವ ಜೆ.ಸಿ ಮಾಧುಸ್ವಾಮಿ ಅವರ ಕಾರು ಅಪಘಾತಕ್ಕೀಡಾಗಿದೆ. ಈ ಘಟನೆ ಚಿಕ್ಕಮಗಳೂರು ಚಿಲ್ಲೆ ಕಡೂರು ತಾಲ್ಲೂಕಿನ ಹೇಮಗಿರಿ ಗೇಟ್ ಬಳಿ ನಡೆದಿದೆ.
ಬೆಳಗ್ಗೆ ಸುಮಾರು 11:10 ವೇಳೆಗೆ ಕಾಡೂರಿನ ಹೇಮಗಿರಿ ಬಳಿಯ ಬೆಂಗಳೂರು-ಹೊನ್ನಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದ್ದು, ಸದ್ಯ ಅಪಘಾತದಲ್ಲಿ ಮಾಧುಸ್ವಾಮಿ ಹಾಗೂ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಕಾರು ಆಟೋಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ. ಗುಜುರಿ ಆಟೋಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕನಿಗೆ ಸಣ್ಣ-ಪುಟ್ಟ ಗಾಯಗಳಾಗಿದೆ. ಸದ್ಯ ಘಟನೆಯಲ್ಲಿ ಯಾವುದೆ ಆಪಾಯ ಸಂಭವಿಸಿಲ್ಲ. ಇನ್ನು ಆಟೋ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಾಜಿ ಸಚಿವ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಪ್ರಚಾರ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು. ಬೀರೂರಿನಲ್ಲಿ 11 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.