ಪ್ರವೀಣ್ ನೆಟ್ಟಾರು ಹತ್ಯೆ ಸಂಬಂಧ ನ್ಯಾಯ ಸಿಗುವವರೆಗೂ ವಿರಮಿಸಲ್ಲ, ಅವರ ಬಲಿದಾನ ಎಂದಿಗೂ ವ್ಯರ್ಥವಾಗಲ್ಲ: ಜೆ.ಪಿ.ನಡ್ಡಾ

Nadda Nettaru
Published on

ಮಂಗಳೂರು: ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಇಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆ ಪ್ರಚಾರಾರ್ಥ ರಾಜ್ಯಕ್ಕೆ ಆಗಮಿಸಿರುವ ಅವರು ಪ್ರವೀಣ್ ಮನೆಗೆ ಭೇಟಿ ನೀಡಿದರು.

ತುಂಬಾ ದುಃಖದಾಯಕ ಘಟನೆ ನಡೆದು ಹೋಗಿದೆ. ಎಸ್​ಡಿಪಿಐ ಮತ್ತು ಪಿಎಫ್ಐ ಈ ಹತ್ಯೆಯ ಹಿಂದಿದ್ದು, ಇದು ಖಂಡನೀಯ. ಈ ಘಟನೆ‌ ನಂತರ ಆ ಸಂಘಟನೆಯನ್ನು ನಿಷೇಧ ಮಾಡಲಾಯಿತು. ನಮ್ಮ ಸರ್ಕಾರ ನಿಷೇಧ ಮಾಡಿ ಎನ್ಐಎ ತನಿಖೆ ಮಾಡುತ್ತಿದೆ ಎಂದು ಹೇಳಿದರು.

ಪ್ರವೀಣ್ ಅವರ ಕುಟುಂಬಕ್ಕೆ ಸಂವೇದನಾಶೀಲ ಸರ್ಕಾರ ಎಲ್ಲವನ್ನೂ ಮಾಡಿದೆ. ಇಂಥ ಮಾನಸಿಕತೆ ವಿರುದ್ಧ ನಮ್ಮ ಹೋರಾಟ ನಿರ್ಣಾಯಕ ಘಟ್ಟದವರೆಗೂ ಮುಂದುವರಿಯಲಿದೆ. ನ್ಯಾಯ ಸಿಗುವವರೆಗೂ ಹೋರಾಟ ಇರಲಿದೆ. ಅವರ ಕುಟುಂಬ ಸದಸ್ಯರ ಜೊತೆ ನಮ್ಮ ಸರ್ಕಾರ ಇರಲಿದೆ. ನಾನು ಅವರಿಗೆ ಶ್ರದ್ಧಾಂಜಲಿ ಅರ್ಪಿಸಿ ‌ಕುಟುಂಬಕ್ಕೆ ಸಾಂತ್ವನ ಹೇಳಿದ್ದೇನೆ. ಪ್ರವೀಣ್ ನೆಟ್ಟಾರು ಹತ್ಯೆ ಸಂಬಂಧ ನ್ಯಾಯ ಸಿಗುವವರೆಗೂ ವಿರಮಿಸುವುದಿಲ್ಲ, ಅವರ ಬಲಿದಾನ ಎಂದಿಗೂ ವ್ಯರ್ಥ ಆಗುವುದಿಲ್ಲ ಎಂದೂ ನಡ್ಡಾ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net