ರಾಜಸ್ಥಾನ ಪ್ರೀಮಿಯರ್ ಲೀಗ್​ ಉದ್ಘಾಟನೆ, ಭರ್ಜರಿ ಹೆಜ್ಜೆ ಹಾಕಿದ ಜಾಕ್ವೆಲಿನ್ ಫರ್ನಾಂಡಿಸ್

jmix
Published on

ರಾಜಸ್ಥಾನ ಪ್ರೀಮಿಯರ್ ಲೀಗ್​ ಉದ್ಘಾಟನೆ ಆಗಿದೆ. ಈ ವೇಳೆ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ಭರ್ಜರಿ ಹೆಜ್ಜೆ ಹಾಕಿದ್ದಾರೆ. ಈ ವಿಡಿಯೋ ಹಾಗೂ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.


ಜಾಕ್ವೆಲಿನ್ ಫರ್ನಾಂಡಿಸ್ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಾಗೂ ವಿಡಿಯೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ನಟಿಯ ಗ್ಲಾಮರ್​ನ ಹಾಡಿ ಹೊಗಳಿದ್ದಾರೆ.


ಜಾಕ್ವೆಲಿನ್ ಫರ್ನಾಂಡಿಸ್ ಅವರು ಶ್ರೀಲಂಕಾ ಮೂಲದವರು. ಅವರು ಭಾರತಕ್ಕೆ ಬಂದು ಸೆಟಲ್ ಆಗಿದ್ದಾರೆ. ಬಾಲಿವುಡ್​ ಅವರ ವೃತ್ತಿ ಜೀವನದ ದಿಕ್ಕನ್ನು ಬದಲಿಸಿದೆ. ಹಲವು ಸೂಪರ್ ಹಿಟ್ ಚಿತ್ರಗಳಲ್ಲಿ ನಟಿಸಿ ಫೇಮಸ್ ಆಗಿದ್ದಾರೆ.


ಜಾಕ್ವೆಲಿನ್ ಫರ್ನಾಂಡಿಸ್ ಅದ್ಭುತವಾಗಿ ಮಾಡುತ್ತಾರೆ. ಈ ಕಾರಣಕ್ಕೆ ಅವರು ಅನೇಕರಿಗೆ ಇಷ್ಟವಾಗುತ್ತಾರೆ. ಜಾಕ್ವೆಲಿನ್​ಗೆ ಇನ್​ಸ್ಟಾಗ್ರಾಮ್​ನಲ್ಲಿ 6.7 ಕೋಟಿ ಹಿಂಬಾಲಕರಿದ್ದಾರೆ.


ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾ 2022ರಲ್ಲಿ ರಿಲೀಸ್ ಆಯಿತು. ಈ ಸಿನಿಮಾದ ‘ರಕ್ಕಮ್ಮ..’ ಹಾಡಿನಲ್ಲಿ ಜಾಕ್ವೆಲಿನ್ ಅವರು ಹೆಜ್ಜೆ ಹಾಕಿ ಗಮನ ಸೆಳೆದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net