

ಶಿವಮೊಗ್ಗ: ಸೊರಬ ತಾಲೂಕಿನ ಜಡೆ ಗ್ರಾಮದಲ್ಲಿ ಶುಕ್ರವಾರ ಸಂಪ್ರದಾಯಿಕ ದನ ಬೆದರಿಸುವ ವೇಳೆ ಹೋರಿ ತಿವಿದು ಯುವಕನೊಬ್ಬ ಮೃತಪಟ್ಟಿದ್ದಾನೆ.
ಜಡೆ ಸಮೀಪದ ಚಗಟೂರು ಗ್ರಾಮದ ಆದಿ ಮೃತ ಯುವಕ ಎಂದು ಗುರುತಿಸಲಾಗಿದೆ. ಪ್ರಾಯೋಜಕರು ಮತ್ತು ಆಯೋಜಕರು ಇಲ್ಲದೇ ಗ್ರಾಮದಲ್ಲಿ ಈ ಬಾರಿ ಹೋರಿ ಬೆದರಿಸುವ ಹಬ್ಬ ಆಚರಣೆ ಮಾಡುವ ಸಂದರ್ಭ ಅವಘಡ ಸಂಭವಿಸಿದೆ.
ಗಂಭೀರವಾಗಿ ಗಾಯಗೊಂಡಿದ್ದ ಆದಿಯನ್ನು ಶಿರಸಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಆನವಟ್ಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.