India - Pak: 'ಪಾಕ್​ಗೆ ಹೋಗ್ತಿರೋದು ಮಾತುಕತೆಗೆ ಅಲ್ಲ': ಜೈಶಂಕರ್ ​

India - Pak
Published on

ನವದೆಹಲಿ: ತಾವು ಬಹುಪಕ್ಷೀಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದೇವೆಯೇ ಹೊರತು ಭಾರತ-ಪಾಕ್(India - Pak) ಸಂಬಂಧದ ಬಗ್ಗೆ ಮಾತನಾಡುವುದಿಲ್ಲ ಎಂದು ವಿದೇಶಾಂಗ ಸಚಿವ ಜೈಶಂಕರ್ ಹೇಳಿದ್ದಾರೆ.

ಶಾಂಘೈ ಸಹಕಾರ ಸಂಘಟನೆ (ಎಸ್‌ಸಿಒ) ಸಭೆಗಾಗಿ ಇದೇ ತಿಂಗಳ 15 ಮತ್ತು 16 ರಂದು ಪಾಕಿಸ್ತಾನಕ್ಕೆ ತೆರಳಲಿರುವ ​ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಎಸ್‌ಸಿಒ ಸದಸ್ಯನಾಗಿ ಅಲ್ಲಿಗೆ ಹೋಗುತ್ತಿದ್ದೇನೆ. ಸಭ್ಯ ನಾಗರಿಕನಾಗಿದ್ದು, ಅದರಂತೆ ನಡೆದುಕೊಳ್ಳುತ್ತೇನೆ ಎಂದು ಹೇಳಿದರು

ಸಾರ್ಕ್ ಕಾರ್ಯಕ್ರಮಗಳು ಮುಂದುವರಿಯುತ್ತಿಲ್ಲ ಮತ್ತು ಸಾರ್ಕ್‌ನ ಒಂದು ಸದಸ್ಯ ರಾಷ್ಟ್ರವು ಆ ಗುಂಪಿಗೆ ಸೇರಿದ ಮತ್ತೊಂದು ದೇಶದ ವಿರುದ್ಧ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುತ್ತಿದೆ. ಆ ಕಾರಣದಿಂದಲೇ ಇತ್ತೀಚಿನ ದಿನಗಳಲ್ಲಿ ಸಾರ್ಕ್ ಸಭೆಗಳು ನಡೆಯುತ್ತಿಲ್ಲ ಎಂದು ಪಾಕ್​ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

ಹೀಗಿದ್ದರೂ ಪ್ರಾದೇಶಿಕ ಚಟುವಟಿಕೆಗಳು ಸಂಪೂರ್ಣವಾಗಿ ನಿಂತಿಲ್ಲ. ಭಾರತೀಯ ಉಪಖಂಡದಲ್ಲಿ ಕಳೆದ ಐದು ವರ್ಷಗಳಲ್ಲಿ ಪ್ರಾದೇಶಿಕ ಏಕೀಕರಣ ಹೆಚ್ಚಾಗಿದೆ. ಆದರೆ, ಕಳೆದ ಒಂಬತ್ತು ವರ್ಷಗಳಲ್ಲಿ ಭಾರತದ ವಿದೇಶಾಂಗ ಸಚಿವರು ಪಾಕಿಸ್ತಾನಕ್ಕೆ ಹೋಗುತ್ತಿರುವುದು ಇದೇ ಮೊದಲು. ಪಾಕಿಸ್ತಾನವು ಈ ಬಾರಿ ಎಸ್​ಸಿಒ ಕೌನ್ಸಿಲ್ ಆಫ್ ಹೆಡ್ಸ್ ಆಫ್ ಗವರ್ನಮೆಂಟ್ (ಸಿಎಚ್​ಜಿ) ಸಭೆ ಆಯೋಜಿಸುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net