ಶಿಲ್ಪಕಲೆಗೆ ಜಕಣಾಚಾರಿ ಕೊಡುಗೆ ಅನನ್ಯ

jakanachari 1
ಶೃಂಗೇರಿ ತಾಲೂಕು ಕಚೇರಿಯಲ್ಲಿ ಏರ್ಪಡಿಸಿದ್ದ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯಲ್ಲಿ ಸುಬ್ರಹ್ಮಣ್ಯ ಆಚಾರ್ಯ ಮಾತನಾಡಿದರು. ಗೌರಮ್ಮ, ರಾಘವೇಂದ್ರ ಆಚಾರ್ಯ ಇದ್ದರು.
Published on

ಶೃಂಗೇರಿ: ಭಾರತೀಯ ಶಿಲ್ಪಕಲೆಗೆ ಅಮರಶಿಲ್ಪಿ ಜಕಣಾಚಾರಿ ನೀಡಿದ ಕೊಡುಗೆ ಚಿರನೂತನ. ಕಲಾವಿದನಿಗೆ ಸೂಕ್ಷ್ಮವಾಗಿ ಶಿಲ್ಪ ಕೆತ್ತುವ ಚಾಕಚಕ್ಯತೆ ಇರಬೇಕು ಎಂದು ತಾಲೂಕು ವಿಶ್ವಕರ್ಮ ಸಂಘದ ಪದಾಧಿಕಾರಿ ಸುಬ್ರಹ್ಮಣ್ಯ ಆಚಾರ್ಯ ತಿಳಿಸಿದರು.
ತಾಲೂಕು ಕಚೇರಿಯಲ್ಲಿ ಸೋಮವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಯೋಜಿಸಿದ್ದ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಹಲವು ದೇವಾಲಯಗಳನ್ನು ನಿರ್ಮಿಸಿ ದಂತಕಥೆಯಾದ ಶಿಲ್ಪಿ ಅವರಾಗಿದ್ದು ಕಲ್ಯಾಣಿ ಚಾಲುಕ್ಯರು ಹಾಗೂ ಹೊಯ್ಸಳರ ಶೈಲಿಯ ದೇವಾಲಯಗಳನ್ನು ಬೇಲೂರು ಹಾಗೂ ಹಳೇಬೀಡಿನಲ್ಲಿ ನಿರ್ಮಿಸಿದ್ದಾರೆ. ಅವರ ಸೃಜನಶೀಲತೆಯಲ್ಲಿ ಮೂಡಿಬಂದ ಚೆನ್ನಕೇಶವ ದೇವಾಲಯದ ಶಿಲ್ಪಕಲೆ ನೋಡುಗರ ಕಣ್ಮನ ಸೆಳೆಯುತ್ತಿದ್ದು ಅವರ ಶಿಲ್ಪಕಲಾ ಚತುರತೆಗೆ ಅವರೇ ಸಾಟಿ. ಮಹಾನ್ ಶಿಲ್ಪಿಯ ಜೀವನ ಚರಿತ್ರೆ ಯುವಶಿಲ್ಪಿಗಳಿಗೆ ಮಾದರಿಯಾಗಬೇಕು ಎಂದರು.
ತಹಸೀಲ್ದಾರ್ ಗೌರಮ್ಮ ಸಮಾರಂಭ ಉದ್ಘಾಟಿಸಿದರು. ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ರಾಘವೇಂದ್ರ ಆಚಾರ್ಯ, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಡಿ.ಸಿ.ಶಂಕರಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net