ಜಲಜೀವನ್ ಮಿಷನ್ ಯೋಜನೆಗೆ ಆದ್ಯತೆ ನೀಡಿ ಕಾಮಗಾರಿ ಪೂರ್ಣಗೊಳಿಸಲು ಲಾಡ್ ಸೂಚನೆ

minister santhosh lad press meet
ಸಚಿವ ಸಂತೋಷ್ ಲಾಡ್ ಮಾತನಾಡಿದರು. ಕೆಪಿಸಿಸಿ ವಕ್ತಾರ ಅನಿಲ್ ತಡಕಲ್ ಸುದ್ದಿಗೋಷ್ಠಿಯಲ್ಲಿದ್ದರು.
Published on

ಬೆಂಗಳೂರು:
ಜಲಜೀವನ್ ಮಿಷನ್ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಮೊದಲ ಆದ್ಯತೆ ನೀಡಿ ಪೂರ್ಣಗೊಳಿಸಬೇಕು ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಸೂಚಿಸಿದ್ದಾರೆ.
ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಯೋಜನೆಯ ಪರಾಮರ್ಶೆ ಮಾಡಿದ ಅವರು, ಧಾರವಾಡ ಜಿಲ್ಲೆಯಲ್ಲಿ ಯಾವುದೇ ಸಮಸ್ಯೆ ಬಾರದಂತೆ ನಿರ್ವಹಣೆ ಮಾಡಬೇಕು ಎಂದು ತಿಳಿಸಿದರು.
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಯೋಜನೆ ಕುರಿತು ಅಧಿಕಾರಿಗಳು ಗಮನ ನೀಡಬೇಕು. ಜನಪ್ರತಿನಿಧಿಗಳ ಸಲಹೆ ಸಹಕಾರ ಪಡೆದು ಸಮಸ್ಯೆ ಬಗೆಹರಿಸಬೇಕು ಎಂದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕಾ ಖರ್ಗೆ ಅವರು ಮಾತನಾಡಿ, ಜಲಜೀವನ ಯೋಜನೆಗೆ ಸಂಬಂದಿಸಿದಂತೆ ಯಾವುದೇ ಸಮಸ್ಯೆ ಇದ್ದರೂ ತಮ್ಮ ಗಮನಕ್ಕೆ ತರಬಹುದು. ಕೂಡಲೇ ಆ ಸಮಸ್ಯೆ ಪರಿಹರಿಸುವ ಕೆಲಸ ಮಾಡುವುದಾಗಿ ತಿಳಿಸಿದರು.
ಸಭೆಯಲ್ಲಿ ನವಲಗುಂದ ಕ್ಷೇತ್ರದ ಶಾಸಕರಾದ ಕೋನರೆಡ್ಡಿ, ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ವರೂಪ, ಕೆ.ಯುಡಬ್ಲ್ಯು.ಡಿ.ಬಿ ಅಧಿಕಾರಿಗಳು ಮತ್ತು ಸಭೆಗೆ ಸಂಭಂದ ಪಟ್ಟ ಧಾರವಾಡ ಜಿಲ್ಲಾ ಹಿರಿಯ ಅಧಿಕಾರಿಗಳು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net