ಜಮ್ಮು ಮತ್ತು ಕಾಶ್ಮೀರ: ಕೊನೆಯ ಹಂತದ ಮತದಾನಕ್ಕೆ ಅಧಿಸೂಚನೆ ಪ್ರಕಟ!

v
Published on

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ವಿಧಾನಸಭೆ ಚುನಾವಣೆಯ ಮೂರನೇ ಹಾಗೂ ಕೊನೆಯ ಹಂತದ ಮತದಾನಕ್ಕೆ ಇಂದು ಕೇಂದ್ರ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಮೂರನೇ ಮತ್ತು ಕೊನೆ ಹಂತದಲ್ಲಿ 40 ವಿಧಾನಸಭಾ ಸ್ಥಾನಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ.

ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಪ್ಟೆಂಬರ್ 18ರಂದು ಮೊದಲ ಹಂತದ ಚುನಾವಣೆ ನಡೆಯಲಿದ್ದು, ಮೂರನೇ ಮತ್ತು ಕೊನೆಯ ಹಂತದ ಮತದಾನ ಅಕ್ಟೋಬರ್ 1 ರಂದು ನಿಗದಿಯಾಗಿದೆ.

ಕುಪ್ವಾರ, ಬಾರಾಮುಲ್ಲಾ, ಬಂಡಿಪೋರಾ, ಉಧಂಪುರ, ಕಥುವಾ, ಸಾಂಬಾ ಮತ್ತು ಜಮ್ಮು ಜಿಲ್ಲೆಗಳು ಸೇರಿದಂತೆ ಈ 40 ವಿಧಾನಸಭೆ ಕ್ಷೇತ್ರಗಳಿಗೆ ಕೊನೆಯ ಹಂತದ ಮತದಾನ ನಡೆಯಲಿದೆ. ಕಾಶ್ಮೀರ ವಲಯದ 16 ಹಾಗೂ ಜಮ್ಮು ವಲಯದ 24 ಕ್ಷೇತ್ರಗಳಿಗೆ ಮತದಾನಕ್ಕೆ ಅಧಿಸೂಚನೆ ಹೊರಡಿಸಲಾಗಿದೆ.

ಸೆಪ್ಟೆಂಬರ್ 12 ಉಮೇದುವಾರಿಕೆ ಸಲ್ಲಿಸಲು ಕೊನೆಯ ದಿನವಾಗಿದ್ದು, ಸೆಪ್ಟೆಂಬರ್ 13 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಸೆ.17 ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿದೆ.

90 ಸದಸ್ಯ ಬಲದ ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟು ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ. ಸೆ.18ರಂದು ಮೊದಲ ಹಂತದ ಮತದಾನ, ಸೆ.25 ರಂದು ಎರಡನೇ ಹಂತ ಹಾಗೂ ಅಕ್ಟೋಬರ್ 1 ರಂದು ಮೂರನೇ ಮತ್ತು ಕೊನೆಯ ಹಂತದ ಮತದಾನ ನಡೆಯಲಿದೆ. ಅಕ್ಟೋಬರ್ 4ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ 10 ವರ್ಷಗಳ ಬಳಿಕ ಚುನಾವಣೆ ನಡೆಯುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net