

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂದೇರ್ಬಲಿಯಲ್ಲಿ ಮೇಘಸ್ಫೋಟ ಸಂಭವಿಸಿದ್ದು, ನಂತರ ಪ್ರವಾಹ ಪರಿಸ್ಥಿತಿ ಉಂಟಾಗಿದೆ.
ಇದನ್ನೂ ಓದಿ: ರಾಜ್ಯದಲ್ಲಿ ಮಳೆ ಇಳಿಮುಖ:ಹಲವೆಡೆ ಬಿಸಿಲು ವಾತಾವರಣ
ಜನವಸತಿ ಪ್ರದೇಶಕ್ಕೆ ನೀರು ನುಗ್ಗಿದೆ. ಸದ್ಯಕ್ಕೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಮೇಘಸ್ಫೋಟದಿಂದಾಗಿ ಹಲವು ರಸ್ತೆಗಳನ್ನು ಮುಚ್ಚಲಾಗಿದೆ. ಈ ಪ್ರದೇಶದಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ.
ಪ್ರವಾಹದ ಪರಿಣಾಮವಾಗಿ, ರಾಜ್ಯದಲ್ಲಿ 294 ಟ್ರಾನ್ಸ್‌ಫಾರ್ಮರ್‌ಗಳು ಮತ್ತು 124 ನೀರು ಸರಬರಾಜು ವ್ಯವಸ್ಥೆಗಳು ಹಾನಿಗೊಳಗಾಗಿವೆ. ಮುಂದಿನ ಮೂರು ದಿನ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಹಲವು ಜಮೀನುಗಳು, ವಾಹನಗಳು ನಾಶವಾಗಿವೆ. ಈ ಪ್ರದೇಶದಲ್ಲಿ ಭಾರಿ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದೇ ವೇಳೆ ಉತ್ತರಾಖಂಡದ ಕೇದಾರನಾಥದಲ್ಲಿ ಭೂಕುಸಿತ ಸಂಭವಿಸಿದೆ. ಈ ಪ್ರದೇಶದಲ್ಲಿ ಸಿಲುಕಿರುವ ಯಾತ್ರಾರ್ಥಿಗಳನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದೆ. ಈ ಪ್ರದೇಶದಲ್ಲಿ ಸುಮಾರು 1300 ಮಂದಿ ಸಿಲುಕಿದ್ದು, ಅವರನ್ನು ಸುರಕ್ಷಿತವಾಗಿ ಕರೆತರುವ ಪ್ರಯತ್ನ ನಡೆಯುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.