ಜಮ್ಮುವಿನ ಬಳಿ ಉಗ್ರರ ದಾಳಿಗೆ ಓರ್ವ ಯೋಧ ಹುತಾತ್ಮ- ಇಬ್ಬರ ಸ್ಥಿತಿ ಗಂಭೀರ

JK Encounter 7 JUN 20
Published on

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇದಾಗಲೇ ಭಾರತೀಯ ಯೋಧರು ಹಲವಾರು ಉಗ್ರರನ್ನು ಹೊಡೆದುರುಳಿಸಿದ್ದಾರೆ.

ಇಂದು ಕೂಡ ಹೋರಾಟ ಮುಂದುವರೆದಿದೆ. ಆದರೆ ಇಂದು ಸೊಪೋರ್'ನಲ್ಲಿ ಉಗ್ರರ ದಾಳಿಯಲ್ಲಿ ಭಾರತದ ಸಿಆರ್‌ಪಿಎಫ್‌ನ  ಓರ್ವ ಯೋಧ ಹುತಾತ್ಮರಾಗಿದ್ದಾರೆ. ಭಯೋತ್ಪಾದಕರ ದಾಳಿಯಲ್ಲಿ ನಾಗರಿಕನೊಬ್ಬ ಬಲಿಯಾಗಿರುವುದಾಗಿ ಮೂಲಗಳು ತಿಳಿಸಿವೆ.

ಸೊಪೋನಾನ ಮಾಡೆಲ್ ಟೌನ್ ಬಳಿ ಈ ಘಟನೆ ನಡೆದಿದೆ. ದಾಳಿಯಲ್ಲಿ ಮೂವರು ಸಿಆರ್‌ಪಿಎಫ್ ಯೋಧರು ಹಾಗೂ ಓರ್ವ ನಾಗರಿ ಗಂಭೀರವಾಗಿ ಗಾಯಗೊಂಡಿದ್ದರು, ಇವರಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

ಈ ನಡುವೆ ಉಗ್ರರು ದಾಳಿ ನಡೆಸಿದ್ದ ಸ್ಥಳದ ಸುತ್ತಲೂ ಯೋಧರು ಸುತ್ತುವರೆದಿದ್ದು, ಕಾರ್ಯಾಚರಣೆ ನಡೆಸುತ್ತಿದ್ದಾರೆಂದು ಎಂದು ತಿಳಿದುಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net