Jammu & Kashmir: ಸರ್ಕಾರ ರಚನೆಗೆ ತನ್ನ ಬೆಂಬಲ ಸ್ಪಷ್ಟಪಡಿಸಿದ ಪಿಡಿಪಿ!

Jammu & Kashmir
Published on

ಶ್ರೀನಗರ: ಜಮ್ಮು-ಕಾಶ್ಮೀರ(Jammu & Kashmir) ವಿಧಾನಸಭಾ ಚುನಾವಣೆಯ ಫಲಿತಾಂಶ ಅ.8ಕ್ಕೆ ಪ್ರಕಟವಾಗಲಿದ್ದು, ಭಾರಿ ಕುತೂಹಲ ಕೆರಳಿಸಿದೆ. ಅನೇಕ ನಿರ್ಗಮನ ಸಮೀಕ್ಷೆಗಳು ಯಾವುದೇ ಪಕ್ಷ ಅಥವಾ ಮೈತ್ರಿ ಸರ್ಕಾರ ರಚಿಸಲು ಅಗತ್ಯವಿರುವ ಬಹುಮತವನ್ನು ಪಡೆಯಲು ಸಾಧ್ಯವಾಗುವುದಿಲ್ಲ ಎಂದು ಭವಿಷ್ಯ ನುಡಿದಿದ್ದು, ಸರ್ಕಾರ ರಚಿಸಲು ಯಾರ ಬೆಂಬಲ ಬೆಂಬಲ ಯಾರಿಗೆ ಎಂಬುದರ ಕುರಿತು ಅದರ ಹಿಂದಿನ ದಿನವಾದ ಸೋಮವಾರ ಚರ್ಚೆಗಳು, ಗಾಳಿ ಸುದ್ದಿಗಳು ಹರಿದಾಡುತ್ತಿವೆ.

ಇದೇ ಹಿನ್ನೆಲೆಯಲ್ಲಿ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಸ್ಪಷ್ಟನೆ ನೀಡಿದ್ದು, ಫಲಿತಾಂಶ ಹೊರಬಿದ್ದ ನಂತರವೇ ಯಾವ ಪಕ್ಷವನ್ನು ಬೆಂಬಲಿಸಬೇಕು ಎಂಬ ಬಗ್ಗೆ ನಿರ್ಧಾರ ಕೈಗೊಳ್ಳುವುದಾಗಿ ಪಕ್ಷ ಹೇಳಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂಬರುವ ಸರ್ಕಾರ ಜಾತ್ಯತೀತ ಸರ್ಕಾರವಾಗಲಿದೆ. ತಮ್ಮ ಪಕ್ಷದ ಬೆಂಬಲವಿಲ್ಲದೆ ಯಾರೂ ಸರ್ಕಾರ ರಚಿಸಲು ಸಾಧ್ಯವಿಲ್ಲ ಎಂದು ಪಿಡಿಪಿ ಮುಖ್ಯಸ್ಥೆ ಮೊಹಬೂಬಾ ಮುಫ್ತಿ ಘೋಷಿಸಿದ್ದಾರೆ.

ಮೆಹಬೂಬಾ ಮುಫ್ತಿ ಅವರ ಮುಖ್ಯ ಸಲಹೆಗಾರ್ತಿ ಇಲ್ತಿಜಾ ಮುಫ್ತಿ ಅವರು ಸೋಮವಾರ ಸಾಮಾಜಿಕ ಮಾಧ್ಯಮ 'ಎಕ್ಸ್' ನಲ್ಲಿ ಈ ಕುರಿತು ಹೆಚ್ಚಿನ ಸ್ಪಷ್ಟೀಕರಣವನ್ನು ನೀಡಿದ್ದಾರೆ. ಈ ವಿಚಾರದಲ್ಲಿ ನಮ್ಮ ಪಕ್ಷ ಸ್ಪಷ್ಟವಾಗಿದೆ. ಚುನಾವಣಾ ಫಲಿತಾಂಶ ಬಂದ ನಂತರವೇ ಬೆಂಬಲ ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ. ನಮ್ಮ ಬೆಂಬಲ ಜಾತ್ಯತೀತ ರಂಗಕ್ಕೆ ಮಾತ್ರ ಎಂದಿದ್ದಾರೆ.

ಕಾಂಗ್ರೆಸ್-ಎನ್‌ಸಿ ಮೈತ್ರಿಕೂಟಕ್ಕೆ ಹೆಚ್ಚಿನ ಲಾಭವಾಗಲಿದೆ ಎಂದು ಬಹುತೇಕ ಎಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿದಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net