ಶಾಸಕ ಎಂ.ಶ್ರೀನಿವಾಸ್ ಅಧ್ಯಕ್ಷತೆ ವಹಿಸಿದ್ದರು. ವೇಳೆ ಸಮ್ಮೇಳನಾಧ್ಯಕ್ಷ ಡಾ.ರಾಮೇಗೌಡ(ರಾಗೌ) ಅವರನ್ನು ಸನ್ಮಾನಿಸಲಾಯಿತು. ಸಮ್ಮೇಳನ ಕುರಿತು ಡಾ.ಹಿ.ಶಿ.ರಾಮಚಂದ್ರೇಗೌಡ ಮಾತನಾಡಿದರು. ಇದೇ ವೇಳೆ ಕಲಾವಿದರನ್ನು ಅಭಿನಂದಿಸಲಾಯಿತು. ಕಲಾತಂಡಗಳಿಗೆ ಪ್ರಮಾಣಪತ್ರ ವಿತಿಸಲಾಯಿತು. ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ, ಜಿಲ್ಲಾ ಕಸಾಪ ಮಾಜಿ ಮೀರಾ ಶಿವಲಿಂಗಯ್ಯ, ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಪಿ.ಸ್ವಾಮಿ, ಕೀಲಾರ ಕೃಷ್ಣೇಗೌಡ ಇತರರು ಭಾಗವಹಿಸಿದ್ದರು.