ಜಾಹ್ನವಿ ಕಪೂರ್ ಆಸ್ಪತ್ರೆಗೆ..ಕಾರಣ ಇದೇ ನೋಡಿ..

jkapoor
Published on

ಮುಂಬೈ: ಒಂದರ ಮೇಲೊಂದರಂತೆ ಸಿನಿಮಾ, ಬಿಡುವಿಲ್ಲದ ದಿನಚರಿಯಿಂದಾಗಿ ಬಳಲಿದಂತೆ ಕಂಡುಬರುತ್ತಿರುವ ಬಾಲಿವುಡ್ ನಟಿ ಜಾಹ್ನವಿ ಕಪೂರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪ್ರಸ್ತುತ ಆಕೆ ಫುಡ್​ ಪಾಯ್ಸನಿಂಗ್​ ನಿಂದ ಬಳಲುತ್ತಿದ್ದು, ತೀವ್ರ ಅಸ್ವಸ್ಥಳಾಗಿದ್ದ ಆಕೆಯನ್ನು ಮುಂಬೈನ ಆಸ್ಪತ್ರೆಗೆ ಸೇರಿಸಲಾಗಿದೆ. ಇದನ್ನು ಆಕೆಯ ತಂದೆ ಬೋನಿ ಕಪೂರ್ ಬಹಿರಂಗಪಡಿಸಿದ್ದಾರೆ.

ಜಾಹ್ನವಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಕೆಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಇನ್ನೆರಡು ದಿನಗಳಲ್ಲಿ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದು ಎಂದು ಆಸ್ಪತ್ರೆ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

ಜಾಹ್ನವಿ ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಗುಲ್ಶನ್ ದೇವಯ್ಯ ಮತ್ತು ರೋಷನ್ ಮ್ಯಾಥ್ಯೂ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ 'ಉಲಜಾ' ಚಿತ್ರದ ಟ್ರೈಲರ್ ಅಭಿಮಾನಿಗಳನ್ನು ಆಕರ್ಷಿಸುತ್ತಿದೆ. ಪ್ರಸ್ತುತ ಎನ್‌ಟಿಆರ್ ಅಭಿನಯದ 'ದೇವರ'ದಲ್ಲಿ ನಟಿಸುತ್ತಿದ್ದಾರೆ. ಅದೇ ರೀತಿ ರಾಮ್ ಚರಣ್ ಅವರ ಮುಂಬರುವ ಚಿತ್ರದಲ್ಲಿ ನಾಯಕಿಯಾಗಿ ಜಾಹ್ನವಿ ಆಯ್ಕೆಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net