16 ರಂದು ಜನಿವಾರ ಸಂಘದ ಚುನಾವಣೆ

Published on

ಚನ್ನರಾಯಪಟ್ಟಣ : ತಾಲೂಕಿನ ಕಸಬಾ ಹೋಬಳಿ ಜನಿವಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆಯ ಚುನಾವಣೆ ಫೆ.16ಕ್ಕೆ ನಡೆಯಲಿದೆ.

ಅವಶ್ಯಕತೆ ಬಿದ್ದಲ್ಲಿ ಫೆ.16 ರಂದು ಜನಿವಾರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳಗ್ಗೆ 9 ರಿಂದ ಸಂಜೆ 4 ಗಂಟೆವರೆಗೆ ಮತದಾನ ಪ್ರಕ್ರಿಯೆ ನಡೆಸಲಾಗುತ್ತದೆ. ಚುನಾವಣೆಯಲ್ಲಿ ಮತ ಚಲಾಯಿಸಲು ಗುರುತಿನ ಚೀಟಿ ಕಡ್ಡಾಯವಾಗಿದ್ದು, ಸಂಘದ ಸದಸ್ಯರು ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ ಸಲ್ಲಿಸಿ, ಸಂಘದಿಂದ ಗುರುತಿನ ಚೀಟಿ ಪಡೆಯಲು ತಿಳಿಸಿದೆ. ಸಂಘದ ಕಚೇರಿಯಲ್ಲಿ ಫೆ.2 ರಿಂದ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಲಿದ್ದು ಪ್ರತಿದಿನ ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆತನಕ ಸ್ವೀಕರಿಸಲಾಗುವುದು. ಫೆ.8 ರಂದು ನಾಮಪತ್ರ ಸಲ್ಲಿಸಲು ಕೊನೇ ದಿನಾಂಕವಾಗಿರುತ್ತದೆ. ಚುನಾವಣೆ ಸಂಬಂಧ ಹೆಚ್ಚಿನ ಮಾಹಿತಿಯನ್ನು ಸಹಕಾರ ಸಂಘದ ಕಚೇರಿಯಲ್ಲಿ ಪಡೆಯಲು ತಿಳಿಸಿದೆ ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net