ಜನಿವಾರ ಕಳಚಿದ ಪ್ರಕರಣ; ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ನೀಡಲು ಸರ್ಕಾರ ಬದ್ಧ: DK ಶಿವಕುಮಾರ್

dk - 2025-04-20T201307.692
Published on

ವಿದ್ಯಾರ್ಥಿಗಳ ಜನಿವಾರ ಕಳಚಿಸಿರುವ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ಕೊಡಲು ಸರ್ಕಾರ ಬದ್ಧ ಎಂದು ಡಿಸಿಎಂ DK ಶಿವಕುಮಾರ್ ತಿಳಿಸಿದರು.

ಬೆಳ್ತಂಗಡಿಯಲ್ಲಿ ಭಾನುವಾರ ಸುದ್ದಿಗಾರರೊ0ದಿಗೆ ಮಾತನಾಡಿದರು. "ಧರ್ಮ ಆಚರಣೆ ವಿಚಾರದಲ್ಲಿ ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ. ಆಯಾ ಧರ್ಮ ಉಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಯಾರೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ನಮ್ಮ ಸರ್ಕಾರ ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗುವ ಕೆಲಸ ಮಾಡಲಿದೆ" ಎಂದು ತಿಳಿಸಿದರು.

ಧರ್ಮ ಯಾವುದಾದರೂ ತತ್ವ ಒಂದೇ, ನಾಮ ನೂರಾದರೂ ದೈವ ಒಂದೇ, ಪೂಜೆ ಯಾವುದಾದರೂ ಭಕ್ತಿ ಒಂದೇ. ಕರ್ಮ ಹಲವಾದರೂ ನಿಷ್ಠೆ ಒಂದೇ, ದೇವನೊಬ್ಬ ನಾಮ ಹಲವು. ನಾವು ಹುಟ್ಟುವಾಗ ಇಂತಹುದೇ ಜಾತಿ, ಧರ್ಮದಲ್ಲಿ ಹುಟ್ಟಬೇಕು ಎಂದು ಅರ್ಜಿ ಹಾಕಿ ಹುಟ್ಟಿಲ್ಲ. ನಾವು ಜಾತಿ ಧರ್ಮ ಬೇಡ ಎಂದು ಎಷ್ಟೇ ಹೇಳಿದರೂ, ನಮ್ಮ ಹುಟ್ಟು ಹಾಗೂ ಸಾವು ನಮ್ಮ ಜಾತಿ ಹಾಗೂ ಧರ್ಮಗಳನ್ನು ನೆನಪಿಸುತ್ತದೆ ಎಂದರು.

ಅನೇಕರು ರಾಜಕೀಯ ಟೀಕೆ ಮಾಡುತ್ತಿದ್ದಾರೆ. ಮಾಡಕೊಳ್ಳಲಿ. ಟೀಕೆ ಮಾಡಿದರೆ ನಾವು ತಿದ್ದುಕೊಳ್ಳಲು ಅವಕಾಶ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ. ನಮ್ಮಲ್ಲಿ ದೋಷ ಇದ್ದರೆ ಮಾತ್ರ ತಿದ್ದುಕೊಳ್ಳಲು ಸಾಧ್ಯ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net