7 ದಿನಕ್ಕೆ ಬಾಕ್ಸ್​ ಆಫೀಸ್​ನಲ್ಲಿ 368 ಕೋಟಿ ರೂಪಾಯಿ ಗಳಿಸಿದ ‘ಜವಾನ್​’ ಚಿತ್ರ

jmix
Published on

Jawaan movie collection in India: ಲಿವುಡ್​ ಅಂಗಳದಲ್ಲಿ ಭಾರೀ ಸದ್ದು ಮಾಡುತ್ತಿರುವ ಕಿಂಗ್​ ಖಾನ್, ಶಾರುಖ್ ಖಾನ್ ನಟನೆಯ ‘ಜವಾನ್’​ ಚಿತ್ರ, ಜಾಗತಿಕ ಬಾಕ್ಸ್ ಆಫೀಸ್​ನಲ್ಲಿ ಭರ್ಜರಿ ಕಲೆಕ್ಷನ್​ ಮಾಡುವ ಮೂಲಕ ಸಿನಿಪ್ರಿಯರಿಂದ ಉತ್ತಮ ರೆಸ್ಪಾನ್ಸ್​ ಪಡೆದಿದೆ.


ಸಿನಿಮಾದಲ್ಲಿ ಶಾರುಖ್​ ಖಾನ್​ ಅವರು ಆ್ಯಕ್ಷನ್​ ಹೀರೋ ಆಗಿ ಅಭಿಮಾನಿಗಳನ್ನು ರಂಜಿಸಿದ್ದಾರೆ. ಅವರ ಮಾಡಿರುವ ದ್ವಿಪಾತ್ರಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆ ಸಿಕ್ಕಿದೆ. ಅವರ ಜೊತೆ ನಟಿಸಿರುವ ದೀಪಿಕಾ ಪಡುಕೋಣೆ, ವಿಜಯ್​ ಸೇತುಪತಿ, ನಯನತಾರಾ, ಸಾನ್ಯಾ ಮಲ್ಹೋತ್ರಾ, ಪ್ರಿಯಾಮಣಿ ಮುಂತಾದವರ ಪಾತ್ರಗಳು ಕೂಡ ಹೈಲೈಟ್​ ಆಗಿವೆ.


7 ದಿನದಲ್ಲಿ ಭಾರತದ ಮಾರುಕಟ್ಟೆಯಲ್ಲಿ ಈ ಸಿನಿಮಾಗೆ ಬರೋಬ್ಬರಿ 386 ಕೋಟಿ ರೂಪಾಯಿ ಗಳಿಕೆ ಆಗಿದೆ. ಇದರಿಂದ ಶಾರುಖ್​ ಖಾನ್​ ಮುಖದಲ್ಲಿ ನಗು ಮೂಡಿದೆ. ಇನ್ನು ನಿರ್ದೇಶಕ ಅಟ್ಲಿ ಅವರಿಗೆ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬೇಡಿಕೆ ಹೆಚ್ಚಾಗಿದೆ.


ದೀಪಿಕಾ ಪಡುಕೋಣೆ, ವಿಜಯ್​ ಸೇತುಪತಿ, ನಯನತಾರಾ, ಸಾನ್ಯಾ ಮಲ್ಹೋತ್ರಾ, ಪ್ರಿಯಾಮಣಿ ಮುಂತಾದವರ ಪಾತ್ರಗಳು ಕೂಡ ಹೈಲೈಟ್​ ಆಗಿವೆ. ಹಿಂದಿ ಪ್ರೇಕ್ಷಕರಿಗೆ ಈ ಸಿನಿಮಾ ತುಂಬ ಇಷ್ಟ ಆಗಿದೆ. ಮೊದಲ ದಿನ ಭರ್ಜರಿ ಓಪನಿಂಗ್ ಪಡೆದುಕೊಂಡ ‘ಜವಾನ್​’ ಸಿನಿಮಾ ನೂರಾರು ಕೋಟಿ ರೂಪಾಯಿ ಕಲೆಕ್ಷನ್​ ಮಾಡುತ್ತಿದೆ.


ಸೆ.28ರಂದು ‘ದಿ ವ್ಯಾಕ್ಸಿನ್ ವಾರ್​’, ‘ಚಂದ್ರಮುಖಿ 2’ ಮುಂತಾದ ಸಿನಿಮಾಗಳು ಬಿಡುಗಡೆ ಆಗಲಿವೆ. ಆ ಚಿತ್ರಗಳಿಗೆ ‘ಜವಾನ್​’ ಪೈಪೋಟಿ ನೀಡಬೇಕಿದೆ.
ಭಾರತದ ಕಲೆಕ್ಷನ್​​ 368 ಕೋಟಿ ಆದ್ರೆ, ವಿಶ್ವಾದ್ಯಂತ 7 ದಿನದಲ್ಲಿ ಈ ಸಿನಿಮಾದ ಕಲೆಕ್ಷನ್​ 650 ಕೋಟಿ ರೂಪಾಯಿ ದಾಟಿದೆ. ಶೀಘ್ರದಲ್ಲೇ ಈ ಚಿತ್ರ ಸಾವಿರ ಕೋಟಿ ರೂಪಾಯಿ ಗಳಿಸಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net