ಮೇಲ್ಮನೆಗೆ ಜವರಾಯಿಗೌಡ ನಾಮಪತ್ರ ಸಲ್ಲಿಕೆ

j
Published on

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವ ಸಂಬಂಧ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ನಡೆಸಲಾಯಿತು.

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಟಿ.ಎನ್.ಜವರಾಯಿಗೌಡ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಆಯ್ಕೆಯಾದ ಬಳಿಕ ಎಲ್ಲ ಶಾಸಕರು ಜವರಾಯಿಗೌಡರನ್ನು ಅಭಿನಂದಿಸಿದರು. ಬಳಿಕ ನಾಮಪತ್ರಕ್ಕೆ ಅನುಮೋದನೆ ಸಹಿ ಮಾಡಿ ವಿಧಾನ ಪರಿಷತ್ ಕಾರ್ಯದರ್ಶಿ ಅವರಿಗೆ ನಾಮಪತ್ರ ಸಲ್ಲಿಸಲಾಯಿತು.

ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಸೇರಿದಂತೆ ಪಕ್ಷದ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net