ಜಯದೇವ ಪ್ರಭಾರ ನಿರ್ದೇಶಕರಾಗಿ ಡಾ.ಕೆ.ಎಸ್. ರವೀಂದ್ರನಾಥ್

Dr K S Ravindranath
Published on

ಬೆಂಗಳೂರು: ಶ್ರೀ ಜಯದೇವ ಹೃದ್ರೋಗ ಸಂಸ್ಥೆಯ ಪ್ರಭಾರ ನಿರ್ದೇಶಕರಾಗಿ ಡಾ. ಕೆ.ಎಸ್. ರವೀಂದ್ರನಾಥ್ ಅವರನ್ನು ನೇಮಿಸಿ ಸರ್ಕಾರ ಅದೇಶ ಹೊರಡಿಸಿದೆ.


ಡಾ. ಸಿ.ಎನ್. ಮಂಜುನಾಥ್ ಅವರ ಅಧಿಕಾರವಧಿ ಬುಧವಾರ ಮುಕ್ತಾಯಗೊಂಡಿದ್ದು, ಅವರು ಡಾ. ಕೆ.ಎಸ್. ರವೀಂದ್ರನಾಥ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು.


ಈ ಹಿಂದೆ ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (ಆರ್‌ಜಿಯುಎಚ್‌ಎಸ್) ಕುಲಪತಿಗಳಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದ ಡಾ. ಕೆ.ಎಸ್. ರವೀಂದ್ರನಾಥ್ ಪ್ರಸ್ತುತ ಜಯದೇವ ಹೃದ್ರೋಗ ಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಸರ್ಕಾರ ಇವರನ್ನು ಮುಂದಿನ ಆದೇಶದವರೆಗೂ ಪ್ರಭಾರ ನಿರ್ದೇಶಕರಾಗಿ ನೇಮಿಸಿ ಆದೇಶ ಹೊರಡಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net