

ಬೆಂಗಳೂರು: ಭಾರತೀಯ ಜನತಾ ಪಕ್ಷ ಜತೆಗೆ ಜೆಡಿಎಸ್ ಪಕ್ಷವೂ ಮೈತ್ರಿಗೊಂಡ ಬೆನ್ನಲ್ಲೇ ಇದೀಗ ಜಾತ್ಯಾತೀತ ಜನತಾದಳ ಪಕ್ಷದ ಅಲ್ಪಸಂಖ್ಯಾತ ಮುಖಂಡರಲ್ಲಿ ತೀವ್ರ ಅಸಮಾಧಾನ ಬುಗಿಲೆದ್ದಿದೆ.
ಅಸಮಾಧಾನಿತ ಜೆಡಿಎಸ್ ಅಲ್ಪಸಂಖ್ಯಾತ ಮುಖಂಡರ ಸಭೆ ನಡೆಯುತ್ತಿದ್ದು, ಕುಮಾರ ಕೃಪ ಅತಿಥಿ ಗೃಹದಲ್ಲಿ ಸಭೆ ಅಂತ್ಯವಾಗಲಿದೆ. 25 ರಿಂದ 30 ಮಂದಿ ಪಾಲ್ಗೊಳ್ಳುವ ಸಾಧ್ಯತೆಯಿದೆ ಎಂದು ಹೇಳಲಾದ ಸಭೆಯಲ್ಲಿ ಚರ್ಚೆ ನಡೆಸಿ ಸಾಮೂಹಿಕ ರಾಜೀನಾಮೆ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.
ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಎನ್.ಎಂ. ನಬಿ, ರಾಜ್ಯ ಅಲ್ಪಸಂಖ್ಯಾತ ವಿಭಾಗದ ಮಾಜಿ ಅಧ್ಯಕ್ಷರಾದ ನಾಸೀರ್ ಹುಸೇನ್, ಮೊಹಿದ್ ಅಲ್ತಾಫ್,
ಯುವ ಘಟಕದ ಕಾರ್ಯಾಧ್ಯಕ್ಷ ಎನ್.ಎಂ.ನೂರ್, ಜಿಲ್ಲಾ ಘಟಕದ ಅಧ್ಯಕ್ಷರು, ಪಧಾದಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.