ಮಾಜಿ ಶಾಸಕ ನಾಗನಗೌಡ ಕಂದಕೂರ ನಿಧನ

Naganagouda
Published on

ಯಾದಗಿರಿ: ಗುರುಮಿಠಕಲ್​ ಕ್ಷೇತ್ರದ ಜೆಡಿಎಸ್​ ಮಾಜಿ ಶಾಸಕ ನಾಗನಗೌಡ ಕಂದಕೂರ(79) ಅವರು ವಿಧಿವಶರಾಗಿದ್ದಾರೆ. ಎದೆನೋವು ಕಾಣಿಸಿಕೊಂಡ ಪರಿಣಾಮ ಅವರನ್ನು ಆಸ್ಪತ್ರೆಗೆ ಚಿಕಿತ್ಸೆ ದಾಖಲಿಸಲಾಗಿತ್ತು. ಆದರೆ, ಹೃದಯಾಘಾತದಿಂದ ಕೊನೆಯುಸಿರು ಎಳೆದಿದ್ದಾರೆ.

ಜೆಡಿಎಸ್​ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ನಾಗನಗೌಡ ಕಂದಕೂರ್​ ಅವರು 2018ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಗುರುಮಿಠಕಲ್​ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು.

2023ರ ಚುನಾವಣೆಯಲ್ಲಿ ವಯಸ್ಸಿನ ಕಾರಣ ನೀಡಿ ಸಕ್ರಿಯ ರಾಜಕಾರಣದಿಂದ ಹಿಂದೆ ಸರಿದಿದ್ದರು. ನಂತರ ಅವರ ಪುತ್ರ ಶರಣಗೌಡ ಕಂದಕೂರ ಅವರಿಗೆ ಜೆಡಿಎಸ್ ಟಿಕೆಟ್ ನೀಡಿತ್ತು. ಗುರುಮಿಠಕಲ್ ಕ್ಷೇತ್ರದ ಶಾಸಕರಾಗಿ ಶರಣಗೌಡ ಆಯ್ಕೆಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net