ಜೆಡಿಎಸ್​ ಶಾಸಕ ಎಚ್.ಡಿ. ರೇವಣ್ಣ ಆಸ್ಪತ್ರೆಗೆ ದಾಖಲು

HD Revanna
Published on

ಬೆಂಗಳೂರು: ಲೈಂಗಿಕ ಕಿರುಕುಳ ಹಾಗೂ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳದ (SIT) ವಶದಲ್ಲಿರುವ ಮಾಜಿ ಸಚಿವ, ಜೆಡಿಎಸ್​ ಶಾಸಕ ಎಚ್.ಡಿ. ರೇವಣ್ಣ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಎಸ್​ಐಟಿ ವಶದಲ್ಲಿರುವ ರೇವಣ್ಣ ಅವರಿಗೆ ಎದೆನೋವು ಹಾಗೂ ಹೊಟ್ಟೆಉರಿ ಕಾಣಿಸಿಕೊಂಡ ಪರಿಣಾಮ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರ ಸೂಚನೆ ಮೇರೆಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net