ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ರಶ್ಮಿ ರಾಮೇಗೌಡ ಅಧಿಕಾರ ಸ್ವೀಕಾರ

r1
Published on

ಬೆಂಗಳೂರು: ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷರಾಗಿ ನೇಮಕಗೊಂಡಿರುವ ರಶ್ಮಿ ರಾಮೇಗೌಡ ಸೋಮವಾರ ಬೆಳಗ್ಗೆ 11ಕ್ಕೆ ಪದಗ್ರಹಣ ಮಾಡಲಿದ್ದಾರೆ.

ಜೆ.ಪಿ.ಭವನದಲ್ಲಿ ನಡೆಯುವ ಸರಳ ಸಮಾರಂಭದಲ್ಲಿ ನಿಕಟ ಪೂರ್ವ ಅಧ್ಯಕ್ಷೆ ಲೀಲಾದೇವಿ ಆರ್. ಪ್ರಸಾದ್ ಅವರಿಂದ ಅಧಿಕಾರ ಸ್ವೀಕರಿಸಲಿದ್ದಾರೆ.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಎಂಎಲ್‌ಸಿ ತಿಪ್ಪೇಸ್ವಾಮಿ ಸೇರಿದಂತೆ ಪಕ್ಷದ ನಾಯಕರು ಈ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಪದಗ್ರಹಣಕ್ಕೂ ಮುನ್ನ ಕಚೇರಿಯಲ್ಲಿ ಪೂಜಾ ಕಾರ್ಯಗಳು ನಡೆಯಲಿವೆ. ಅಧಿಕಾರ ಸ್ವೀಕಾರದ ಬಳಿಕ ರಶ್ಮಿ ರಾಮೇಗೌಡ ಮಹಿಳಾ ಘಟಕದ ಪದಾಧಿಕಾರಿಗಳು, ಮುಖಂಡರ ಜತೆ ಸಭೆ ನಡೆಸಿ ಪಕ್ಷ ಸಂಘಟನೆ ಬಗ್ಗೆ ಚರ್ಚಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net