ಜೆಇಇ ಮುಖ್ಯ ಪರೀಕ್ಷೆ - 2020 : ಪ್ರವೇಶ ಪತ್ರ ಬಿಡುಗಡೆ

Exam
Published on

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್​ಟಿಎ) ಜಂಟಿ ಪ್ರವೇಶ ಪರೀಕ್ಷೆ (ಜೆಇಇ- ಮೇನ್ಸ್) 2020 ರ ಪ್ರವೇಶ ಪತ್ರವನ್ನು ಸೋಮವಾರ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ.

ಜೆಇಇ ಮೇನ್ಸ್ 2020 ಪರೀಕ್ಷೆಗೆ ನೋಂದಾಯಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರಗಳನ್ನು jeemain.nta.nic.in ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಜೆಇಇ ಮೇನ್ಸ್ ಪರೀಕ್ಷೆ ಸೆಪ್ಟೆಂಬರ್ 1 ರಿಂದ 6 ರವರೆಗೆ ಬೆಳಿಗಿನ ಅವಧಿಯಲ್ಲಿ ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಸಂಜೆ ಅವಧಿಯಲ್ಲಿ ಮಧ್ಯಾಹ್ನ 3 ರಿಂದ ಸಂಜೆ 6 ರವರೆಗೆ ಪರೀಕ್ಷೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net