ಹಾಡಹಗಲೇ ಮನೆಯಲ್ಲಿ ಚಿನ್ನಾಭರಣ ಕಳವು

Published on

ಗುಂಡ್ಲುಪೇಟೆ: ಪಟ್ಟಣದ ದ.ರಾ.ಬೇಂದ್ರೆ ನಗರದ ಅಶ್ವಿನಿ ಬಡಾವಣೆಯ ಮನೆಯಲ್ಲಿ ಹಾಡಹಗಲೇ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಲಾಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಬಡಾವಣೆಯ ವಿನಾಯಕ ಕಾನ್ವೆಂಟ್ ರಸ್ತೆಯಲ್ಲಿರುವ ವಿಶ್ವನಾಥ್ ಅವರ ಮನೆಯಲ್ಲಿ ಶನಿವಾರ ಕಳ್ಳತನ ನಡೆದಿದೆ. ವೃತ್ತಿಯಲ್ಲಿ ಚಾಲಕರಾಗಿರುವ ಇವರು ಕೆಲಸದ ನಿಮಿತ್ತ ಹೊರಗಡೆ ಹೋಗಿದ್ದರು. ಕಳ್ಳರು ಮುಂಭಾಗದ ಬಾಗಿಲನ್ನು ಮೀಟಿ ಒಳನುಗ್ಗಿ ಬೀರುವಿನಲ್ಲಿಟ್ಟಿದ್ದ 1.41 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿದ್ದಾರೆ. ಭಾನುವಾರ ಮನೆಗೆ ವಾಪಸಾದ ವಿಶ್ವನಾಥ್‌ಗೆ ಬಾಗಿಲು ಮೀಟಿರುವುದನ್ನು ನೋಡಿ ಕಳವು ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು ಕಳ್ಳರ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ. ಶೀಘ್ರದಲ್ಲೇ ಕಳ್ಳನನ್ನು ಬಂಧಿಸಲಾಗುವುದು ಎಂದು ಸರ್ಕಲ್ ಇನ್‌ಸ್ಪೆಕ್ಟರ್ ಜಯಕುಮಾರ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net