ಜಾರ್ಖಂಡ್‌: ಮೊಹರಂ ಮೆರವಣಿಗೆ ವೇಳೆ ಗಲಾಟೆ, ಆರು ಮಂದಿಗೆ ಗಾಯ

miohara
Published on

ಧನ್‌ಬಾದ್: ಜಾರ್ಖಂಡ್‌ನ ಧನ್‌ಬಾದ್ ಜಿಲ್ಲೆಯಲ್ಲಿ ಮೊಹರಂ ಮೆರವಣಿಗೆಯ ವೇಳೆ ಎರಡು ಗುಂಪುಗಳ ಮಧ್ಯೆ ನಡೆದ ಸಂಘರ್ಷಣೆಯಲ್ಲಿ ಕನಿಷ್ಠ ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ವಾಸೇಪುರದ ಪಂಡರಪಾಲ ಪ್ರದೇಶದಲ್ಲಿ ಬುಧವಾರ ರಾತ್ರಿ ಘಟನೆ ನಡೆದಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಈ ಪ್ರದೇಶದಲ್ಲಿ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ವಿವಿಧ ಸೆಕ್ಷನ್​ಗಳಡಿ ಪೊಲೀಸರು ನಿಷೇಧಾಜ್ಞೆ ಜಾರಿ ಮಾಡಿ. ಬಿಗಿ ಪೊಲೀಸ್ ಭದ್ರತೆಯನ್ನು ಹೆಚ್ಚಿಸಿದ್ದಾರೆ.

ಮೊಹರಂ ಮೆರವಣಿಗೆಯ ಮಾರ್ಗವನ್ನು ಬದಲಾಯಿಸಿದ್ದರಿಂದ ಸಂಘರ್ಷಣೆ ಸಂಭವಿಸಿದೆ. ಮಾಹಿತಿ ಬಂದ ಕೂಡಲೇ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ ಎಂದು ಧನ್‌ಬಾದ್‌ನ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಎಚ್‌ಪಿ ಜನಾರ್ದನನ್ ತಿಳಿಸಿದ್ದಾರೆ. ತೀವ್ರ ಮಳೆಯಾಗಿದ್ದರಿಂದ ರಸ್ತೆಯಲ್ಲಿ ನೀರು ನಿಂತಿದ್ದರಿಂದ ಮಾರ್ಗ ಬದಲಿಸಬೇಕಾಯಿತು ಎಂದು ಆಯೋಜಕರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net