ನದಿಯಲ್ಲಿ ದೋಣಿ ಮುಳುಗಿ ನಾಲ್ವರು ದುರ್ಮರಣ, ಹಲವರು ನಾಪತ್ತೆ

JK
Published on

ಶ್ರೀನಗರ: ವಿಹಾರಕ್ಕೆ ತೆರಳಿದ್ದ ವೇಳೆ ದೋಣಿ ಮುಗುಚಿದ ಪರಿಣಾಮ ನಾಲ್ವರು ಮೃತಪಟ್ಟು, ಹಲವರು ನಾಪತ್ತೆಯಾಗಿರುವ ಘಟನೆ ಜಮ್ಮು-ಕಾಶ್ಮೀರದ ಶ್ರೀನಗರದ ಹೊರವಲಯದಲ್ಲಿರುವ ಝೀಲಂ ನದಿಯಲ್ಲಿ ನಡೆದಿದೆ.

ಮಂಗಳವಾರ ಮುಂಜಾನೆ ಈ ದುರ್ಘಟನೆ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಈ ಕಾರ್ಯಕ್ಕೆ ಜಮ್ಮು ಮತ್ತು ಕಾಶ್ಮೀರದ ವಿಪತ್ತು ನಿರ್ವಹಣೆ ತಂಡ ಹಾಗೂ ಅಗ್ನಿಶಾಮಕ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಶೋಧ ಕಾರ್ಯಾಚರಣೆ ಭರದಿಂದ ಸಾಗಿದ್ದು, ಈಗಾಗಲೇ ನಾಲ್ವರು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು ಝೀಲಂ ಸೇರಿದಂತೆ ಹಲವಾರು ನದಿಗಳ ನೀರಿನ ಮಟ್ಟ ಹೆಚ್ಚಾಗಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net