

ಶ್ರೀನಗರ: ದೆಹಲಿಯಲ್ಲಿ ಪ್ರಧಾನಿ ಮೋದಿ ಅವರು ಭಾರತದ ಇತಿಹಾಸದಲ್ಲಿ ಸತತ 3 ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನೆಲ್ಲೇ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರು ಅಟ್ಟಹಾಸ ಮರೆದಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಭಾನುವಾರ ಸಂಜೆ ಯಾತ್ರಾರ್ಥಿಗಳಿದ್ದ ಬಸ್ ಕಂದಕಕ್ಕೆ ಉರುಳಿದ್ದು, ಇದಕ್ಕೂ ಮುನ್ನ ಬಸ್ಗೆ ಉಗ್ರಗಾಮಿಗಳು ಗುಂಡು ಹಾರಿಸಿದ್ದಾರೆ. ಈ ಅವಘಡದಲ್ಲಿ 10ಕ್ಕೂ ಹೆಚ್ಚು ಭಕ್ತರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಶಿವಖೋರಿಗೆ ದೇವಸ್ಥಾನಕ್ಕೆ ತೆರಳುತ್ತಿದ್ದ ಯಾತ್ರಾರ್ಥಿ ಬಸ್. ಪೋನಿ ಪ್ರದೇಶದ ತೆರಯತ್ ಗ್ರಾಮದಲ್ಲಿ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆಯ ಅನೇಕ ಸಾವುನೋವುಗಳು ಸಂಭವಿಸುವ ಸಾಧ್ಯತೆ ಇದೆ.
ಬಸ್ ಶಿವಖೋರಾ ದೇವಸ್ಥಾನದಿಂದ ಕತ್ರಾಕ್ಕೆ ಹಿಂತಿರುಗುತ್ತಿದ್ದಾಗ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ರಜೌರಿ, ಪೂಂಚ್ ಮತ್ತು ರಿಯಾಸಿಯ ಮೇಲ್ಭಾಗದಲ್ಲಿ ಅಡಗಿರುವ ಅದೇ ಭಯೋತ್ಪಾದಕರ ಗುಂಪು ಈ ದಾಳಿ ನಡೆಸಿದೆ ಎಂದು ತಿಳಿದು ಬಂದದೆ. ಈವರೆಗೂ ಹಲವರನ್ನು ರಕ್ಷಿಸಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ರಿಯಾಸಿ ಜಿಲ್ಲೆಯ ಜಿಲ್ಲಾಧಿಕಾರಿ ವಿಶೇಷ್ ಮಹಾಜನ್ ತಿಳಿಸಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಹೆಚ್ಚುವರಿ ಭದ್ರತಾ ಪಡೆಗಳನ್ನು ರವಾನಿಸಲಾಗಿದೆ. ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಪ್ರಗತಿಯಲ್ಲಿದೆ.