Bihar Election| ಇಂಡಿಯಾ ಮೈತ್ರಿಕೂಟದ ಭಾಗವಾಗದೇ 6 ಕ್ಷೇತ್ರಗಳಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಘೋಷಿಸಿದ ಜೆಎಂಎಂ

ವಿಜಯವಾಣಿ (69)
Published on

Ranchi: ಮುಂದಿನ ತಿಂಗಳು ನ. 06 ಮತ್ತು 11ರಂದು ಎರಡು ಹಂತಗಳಲ್ಲಿ ನಡೆಯಲಿರುವ ಬಿಹಾರ ಚುನಾವಣೆಯಲ್ಲಿ(Bihar Election) ಆರು ಕ್ಷೇತ್ರಗಳಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಇಂಡಿಯಾ ಮೈತ್ರಿಕೂಟದ ಪಕ್ಷವಾದ ಜಾರ್ಖಂಡ್​ನ ಆಡಳಿರೂಢ ಜಾರ್ಖಂಡ್ ಮುಕ್ತಿ ಮೋರ್ಚ್ ಶನಿವಾರ(ಅ. 18) ಘೋಷಣೆ ಮಾಡಿದೆ.

ಚುನಾವಣೆಯಲ್ಲಿ ಸ್ಪರ್ಧೆ ಬಗ್ಗೆ ಮಾತನಾಡಿರುವ ಜೆಎಂಎಂ ಪ್ರಧಾನ ಕಾರ್ಯದರ್ಶಿ ಸುಪ್ರಿಯೋ ಭಟ್ಟಾಚಾರ್ಯ, ಬಿಹಾರ ಚುನಾವಣೆಯಲ್ಲಿ ನಮ್ಮ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದೆ. ಅದು ಆರು ವಿಧಾನಸಭಾ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.  ಚಕೈ, ಧಮ್ದಹಾ, ಕಟೋರಿಯಾ (ಎಸ್‌ಟಿ), ಮಣಿಹರಿ (ಎಸ್‌ಟಿ), ಜಮುಯಿ ಹಾಗೂ ಪಿರ್‌ಪೈಂಟಿ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಹೇಳಿದ್ದಾರೆ.

ಬಿಹಾರ ವಿಧಾನಸಭೆಯ 243 ಸ್ಥಾನಗಳಿಗೆ ನವೆಂಬರ್ 6 ಮತ್ತು 11 ರಂದು ಚುನಾವಣೆ ನಡೆಯಲಿದ್ದು, 14 ರಂದು ಮತ ಎಣಿಕೆ ನಡೆಯಲಿದೆ. ಜೆಎಂಎಂ ಸ್ಪರ್ಧಿಸುವುದಾಗಿ ಘೋಷಿಸಿರುವ ಈ ಆರು ಕ್ಷೇತ್ರಗಳಿಗೆ ನ. 11 ರಂದು ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಇನ್ನು ಜೆಎಂಎಂ ಘೋಷಣೆ ಈವರೆಗೂ ಮಿತ್ರ ಪಕ್ಷಗಳಾದ ಆರ್​ಜೆಡಿ, ಕಾಂಗ್ರೆಸ್​ನಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net