ಜೆಎನ್​ಯು ಆವರಣದಲ್ಲಿ ಹಿಂಸಾಚಾರ: ದೆಹಲಿ ಲೆಫ್ಟಿನೆಂಟ್​ ಗವರ್ನರ್​ರೊಂದಿಗೆ ಚರ್ಚಿಸಿದ ಅಮಿತ್​ ಷಾ

jnu jan-1 06 2020 - Copy
Published on

ನವದೆಹಲಿ: ಜವಾಹರ್​ಲಾಲ್​ ನೆಹರು ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್​ ಷಾ ಅವರು ದೆಹಲಿ ಲೆಫ್ಟಿನೆಂಟ್​ ಗವರ್ನರ್​ ಅನಿಲ್​ ಬೈಜಾಲ್​ ಅವರ ಜತೆ ಚರ್ಚೆ ನಡೆಸಿದ್ದಾರೆ.

ವಿವಿ ಆವರಣದಲ್ಲಿ ಮುಸುಕುಧಾರಿಗಳು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಒಂದು ದಿನದ ನಂತರ ಅವರು ಬೈಜಾಲ್​ ಅವರ ಜತೆ ದೂರವಾಣಿಯಲ್ಲಿ ಮಾತನಾಡಿದ್ದಾರೆ.
ವಿವಿಯಲ್ಲಿ ನಡೆಯುತ್ತಿರುವ ಗಲಭೆ ತಡೆಯಲು ಜೆಎನ್​ಯು ವಿದ್ಯಾರ್ಥಿ ಸಂಘಟನೆ ಪ್ರತಿನಿಧಿಗಳ ಸಭೆ ನಡೆಸುವಂತೆ ಇದೇ ವೇಳೆ ಗೃಹ ಸಚಿವರು ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಗೃಹ ಸಚಿವ ಅಮಿತ್​ ಷಾ ಅವರು ದೆಹಲಿ ಪೊಲೀಸ್​ ಮುಖ್ಯಸ್ಥ ಅಮೂಲ್ಯ ಪಟ್ನಾಯಕ್​ ಅವರ ಜತೆ ಕೂಡ ಚರ್ಚೆ ನಡೆಸಿದ್ದಾರೆ.

ಜೆಎನ್​ಯುವ ಆವರಣದಲ್ಲಿ ಭಾನುವಾರ ರಾತ್ರಿ ಹಿಂಸಾಚಾರ ನಡೆದು ವಿವಿ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸೇರಿದಂತೆ 28 ಮಂದಿ ಗಾಯಗೊಂಡಿದ್ದಾರೆ. (ಏಜೆಸ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net