

ನವದೆಹಲಿ: ಮಂಡಿ ಹೌಸ್ನಲ್ಲಿ ಪ್ರತಿಭಟನೆ ನಡೆಸಿ, ರಾಷ್ಟ್ರಭವನದತ್ತ ಹೊರಟ ಜೆಎನ್ಯು ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದಾರೆ.
ಮಾರ್ಗ ಮಧ್ಯದಲ್ಲಿ ಪೊಲೀಸರು ಕಾರು ಮತ್ತು ಬ್ಯಾರಿಕೇಡ್ಗಳನ್ನು ಅಡ್ಡ ಹಾಕಿ ಪ್ರತಿಭಟನಾಕಾರರನ್ನು ತಡೆದಿದ್ದಾರೆ. ಈ ವೇಳೆ ಕೆಲ ವಿದ್ಯಾರ್ಥಿಗಳು ಬ್ಯಾರಿಕೇಡ್ನ್ನು ಹತ್ತಿ ಮುನ್ನುಗ್ಗಲು ಯತ್ನಿಸಿದರು. ಪ್ರತಿಭಟನಾ ನಿರತ ಕೆಲ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದ ಬಸ್ನಲ್ಲಿ ಕರೆದೊಯ್ಯಲಾಯಿತು.
ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ನಾಗರಿಕರು ಮಂಡಿ ಹೌಸ್ ಮುಂದೆ ಮಧ್ಯಾಹ್ನ ಪ್ರತಿಭಟನೆ ಆರಂಭಿಸಿದ್ದರು. ನಂತರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯಕ್ಕೆ ನಡೆದು, ಮನವಿ ಸಲ್ಲಿಸಲು ಪ್ರತಿಭಟನಾಕಾರರು ಯೋಚಿಸಿದ್ದರು.
ಈ ವೇಳೆ ಭಾನುವಾರ ನಡೆದ ಜೆಎನ್ಯು ವಿವಿಯಲ್ಲಿ ನಡೆದ ಹಿಂಸಾಚಾರದ ಬಗ್ಗೆ ಹಾಗೂ ಉಪ ಕುಲಪತಿ ರಾಜೀನಾಮೆಗೆ ಒತ್ತಾಯಿಸಲು ತೀರ್ಮಾನಿಸಿದ್ದರು.
ಆದರೆ ನಂತರ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷೆ ಐಷೆ ಘೋಷ್ ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ರಾಮನಾಥ ಕೋವಿಂದ ಅವರನ್ನೂ ಭೇಟಿ ಮಾಡಲು ತೀರ್ಮಾನಿಸಿದರು. ಪ್ರತಿಭಟನೆಯಲ್ಲಿ ಎಡಪಂಥೀಯ ಮುಖ್ಯಸ್ಥ ಸೀತಾರಾಂ ಯೆಚೂರಿ ಹಾಜರಿದ್ದರು. (ಏಜೆನ್ಸೀಸ್)