ಗೌರಿಬಿದನೂರಲ್ಲಿಂದು ಉದ್ಯೋಗಮೇಳ

Published on

ಗೌರಿಬಿದನೂರು : ನಿಮಾರ್ಣ್​ ಸಂಸ್ಥೆ ಸಹಯೋಗದಲ್ಲಿ ಡಾ.ಎಚ್​.ಎನ್​.ಅಭಿವೃದ್ಧಿ ಪ್ರಾಧಿಕಾರದಿಂದ ಆ.23ರಂದು ಬೃಹತ್​ ಉದ್ಯೋಗ ಮೇಳ ಆಯೋಜಿಸಿದ್ದು, 70ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿವೆ ಎಂದು ಪ್ರಾಧಿಕಾರದ ಅಧ್ಯಕ್ಷ ಎನ್​.ಎಚ್​.ಶಿವಶಂಕರ ರೆಡ್ಡಿ ಹೇಳಿದರು.ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ತಾಲೂಕಿನಲ್ಲಿ ಸಾವಿರಾರು ವಿದ್ಯಾವಂತ ನಿರುದ್ಯೋಗ ಯುವಕ ಯುವತಿಯರು ಇದ್ದಾರೆ. ಸೂಕ್ತ ಉದ್ಯೋಗಾವಕಾಶ ದೊರೆಯುತ್ತಿಲ್ಲ. ಆದ್ದರಿಂದ ನಿರುದ್ಯೋಗಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಅಂಬೇಡ್ಕರ್​ ಅಧ್ಯಯನ ಕೇಂದ್ರದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಎಸ್ಸೆಸ್ಸೆಲ್ಸಿಯಿಂದ ವಿವಿಧ ಪದವೀಧರರಿಗೆ ಉದ್ಯೋಗಾವಕಾಶ ಲಭಿಸಲಿವೆ. ಅವಕಾಶ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.ಜಿಲ್ಲಾ ನಗರ ಯೋಜನೆ ಪ್ರಾಧಿಕಾರ ಅಧ್ಯಕ್ಷ ಕೆ.ಎನ್​.ಕೇಶವ ರೆಡ್ಡಿ, ಮುಖಂಡರಾದ ವೇದಲವೇಣಿ ವೇಣು, ವಿಶ್ವ, ವಿಜಯ್​, ಸುನೀಲ್​ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net