ಐಡಿಬಿಐ ಬ್ಯಾಂಕ್‌ನಲ್ಲಿ 600 ಜೂನಿಯರ್ ಅಸಿಸ್ಟೆಂಟ್‌ ಮ್ಯಾನೇಜರ್‌ ಹುದ್ದೆಗಳ ನೇಮಕಾತಿ: ಇಂದಿನಿಂದ ಅರ್ಜಿ ಪ್ರಕ್ರಿಯೆ ಪ್ರಾರಂಭ

bank (1)
Published on

ಬೆಂಗಳೂರು: ಐಡಿಬಿಐ ಬ್ಯಾಂಕ್ ಇಂದಿನಿಂದ ಅಂದರೆ ಸೆಪ್ಟೆಂಬರ್ 15 ರಿಂದ ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್‌ ಹುದ್ದೆಗಳ ನೇಮಕಾತಿಗಾಗಿ ಆನ್‌ಲೈನ್ ಅಪ್ಲಿಕೇಶನ್ ಪ್ರಕ್ರಿಯೆ ಪ್ರಾರಂಭಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಸೆಪ್ಟೆಂಬರ್ 30 ಎಂದು ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನಿಗದಿತ ಪರೀಕ್ಷಾ ಶುಲ್ಕ 1000 ರೂ.ಅನ್ನು ಪಾವತಿಸಬೇಕಾಗುತ್ತದೆ. ಅರ್ಜಿ ಸಲ್ಲಿಸಲು, ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್ idbibank.in ಗೆ ಭೇಟಿ ನೀಡಿ.

ಐಡಿಬಿಐ ಬ್ಯಾಂಕ್ ಹೊರಡಿಸಿರುವ ನೇಮಕಾತಿ ಅಧಿಸೂಚನೆ ಪ್ರಕಾರ, ಪೂರ್ವ, ಪಶ್ಚಿಮ, ಉತ್ತರ ಮತ್ತು ದಕ್ಷಿಣ ವಲಯದ ವಿವಿಧ ರಾಜ್ಯಗಳಲ್ಲಿರುವ ಶಾಖೆಗಳಿಗೆ ಒಟ್ಟು 600 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಬೇಕಿದೆ. ಇವುಗಳಲ್ಲಿ 243 ಹುದ್ದೆಗಳು ಹೊರತುಪಡಿಸಿ, 162 OBC, 90 SC, 45 ST ಮತ್ತು 60 EWS ವರ್ಗದ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ.

ಇಂದಿನಿಂದ ಅರ್ಜಿ ಪ್ರಕ್ರಿಯೆ ಪ್ರಾರಂಭ
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್ idbibank.in ನ ವೃತ್ತಿ ವಿಭಾಗದಲ್ಲಿ ನೀಡಿರುವ ಲಿಂಕ್‌ನಿಂದ ನೇಮಕಾತಿ ಅಧಿಸೂಚನೆಯ ಪಿಡಿಎಫ್​​ ಅನ್ನು ಡೌನ್‌ಲೋಡ್ ಮಾಡಿ, ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನಿಗದಿತ ಪರೀಕ್ಷಾ ಶುಲ್ಕ 1000 ರೂ.ಪಾವತಿಸಬೇಕಾಗುತ್ತದೆ. ಆದರೆ, ಎಸ್‌ಸಿ, ಎಸ್‌ಟಿ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಕೇವಲ 200 ರೂ.ಇರಲಿದೆ.

ಅರ್ಜಿ ಸಲ್ಲಿಸುವ ಮೊದಲು...
ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ ಅಥವಾ ಯಾವುದೇ ಇತರ ಉನ್ನತ ಶಿಕ್ಷಣ ಸಂಸ್ಥೆಯಿಂದ ಯಾವುದೇ ವಿಭಾಗದಲ್ಲಿ ಪದವೀಧರರಾಗಿರಬೇಕು. ಅಲ್ಲದೆ, ಅಭ್ಯರ್ಥಿಗಳ ವಯಸ್ಸು 31 ಆಗಸ್ಟ್ 2023 ರಂತೆ 20 ವರ್ಷಗಳಿಗಿಂತ ಕಡಿಮೆಯಿರಬಾರದು ಮತ್ತು 25 ವರ್ಷಗಳಿಗಿಂತ ಹೆಚ್ಚಿರಬಾರದು. ವಿವಿಧ ಮೀಸಲಾತಿ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರದ ನಿಯಮಗಳ ಪ್ರಕಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಮತ್ತು ಇತರ ವಿವರಗಳಿಗಾಗಿ ನೇಮಕಾತಿ ಅಧಿಸೂಚನೆಯನ್ನು ನೋಡಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net