ಮಂಗಳೂರು: ಬ್ಲಿಂಕಿಟ್ ಕಂಪೆನಿಯ ವತಿಯಿಂದ ಮಂಗಳೂರಿನಲ್ಲಿ ಖಾಲಿ ಇರುವ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗೆ ನೇರ ಸಂದರ್ಶನವನ್ನು ಜೂನ್ 1 ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ನಗರದ ಫಳ್ನೀರ್ ರಸ್ತೆಯ ಮೋತಿ ಮಹಲ್ ಎದುರುಗಡೆ ಇರುವ ಬ್ಲಿಂಕಿಟ್‌ನಲ್ಲಿ ಆಯೋಜಿಸಲಾಗಿದೆ. ಸಂದರ್ಶನದಲ್ಲಿ ಪಿ.ಯು.ಸಿ ವಿದ್ಯಾರ್ಹತೆ ಹೊಂದಿರುವ 18 ರಿಂದ 30 ವರ್ಷದ ಒಳಗಿನ ಅಭ್ಯರ್ಥಿಗಳು ಸ್ವ-ವಿವರವುಳ್ಳ ಬಯೋಡೇಟಾದೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಕಂಪೆನಿ ವತಿಯಿಂದ ಪಿ.ಎಫ್, ಇ.ಎಸ್.ಐ, ಬೋನಸ್ ಸೌಲಭ್ಯ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಂಗಳೂರು ಇಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.