

ಬೆಂಗಳೂರು: SSC ಸ್ಟೆನೋಗ್ರಾಫರ್ ನೇಮಕಾತಿ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೊಂದು ಸೂಚನೆ. ಕೇಂದ್ರ ಸರ್ಕಾರ ವಿವಿಧ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಖಾಲಿಯಿರುವ ಸ್ಟೆನೋಗ್ರಾಫರ್ ಗ್ರೇಡ್ ಸಿ ಮತ್ತು ಗ್ರೇಡ್ ಡಿ ಸೇರಿದಂತೆ ಒಟ್ಟು 1207 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ. ಈ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಬುಧವಾರ ಅಂದರೆ ಆಗಸ್ಟ್ 23ರಂದು ಕೊನೆಗೊಳ್ಳಲಿದೆ. ಆದ್ದರಿಂದ ಇನ್ನೂ ಅರ್ಜಿ ಸಲ್ಲಿಸದ ಆಸಕ್ತ ಅಭ್ಯರ್ಥಿಗಳು ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಅಂದರೆ ssc.nic.in ನ ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಸಮಯದಲ್ಲಿ, ಅಭ್ಯರ್ಥಿಗಳು 2023 ರ ಸ್ಟೆನೋಗ್ರಾಫರ್ ಗ್ರೇಡ್ ಸಿ ಮತ್ತು ಗ್ರೇಡ್ ಡಿ ಪರೀಕ್ಷೆಯಲ್ಲಿ ಕಾಣಿಸಿಕೊಳ್ಳಲು ಆನ್‌ಲೈನ್ ಮೂಲಕ 100 ರೂ ನಿಗದಿತ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಆದರೆ, ಎಸ್‌ಸಿ, ಎಸ್‌ಟಿ, ವಿಕಲಚೇತನ ಮತ್ತು ಎಲ್ಲಾ ವರ್ಗಗಳ ಮಹಿಳಾ ಅಭ್ಯರ್ಥಿಗಳು ಶುಲ್ಕವನ್ನು ಪಾವತಿಸುವ ಅಗತ್ಯವಿಲ್ಲ. ಆಗಸ್ಟ್ 3 ರಂದು ಅಧಿಸೂಚನೆಯನ್ನು ಬಿಡುಗಡೆ ಮಾಡುವ ಮೂಲಕ ಈ ವರ್ಷ ನಡೆಸಲಾಗುವ ಸ್ಟೆನೋಗ್ರಾಫರ್ ಪರೀಕ್ಷೆಗೆ ಎಸ್‌ಎಸ್‌ಸಿ ಅರ್ಜಿ ಪ್ರಕ್ರಿಯೆಯನ್ನು ಪ್ರಾರಂಭಿಸಿತ್ತು.
ಮಾನ್ಯತೆ ಪಡೆದ ವಿವಿಯಿಂದ ಯಾವುದೇ ಸ್ಟ್ರೀಮ್‌ನಲ್ಲಿ 10+2 ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಮಾತ್ರ SSK ಸ್ಟೆನೋ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದು. ಮೀಸಲಾತಿ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮತ್ತು ಇತರ ವಿವರಗಳಿಗಾಗಿ ಪರೀಕ್ಷೆಯ ಅಧಿಸೂಚನೆ ನೋಡಿ.