ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಹತೆ ಏನು?

Anganawadi
Published on

ಯಾದಗಿರಿ: ಜಿಲ್ಲೆಯ 4 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಖಾಲಿ ಇರುವ 18 ಅಂಗನವಾಡಿ ಕಾರ್ಯಕರ್ತೆ ಮತ್ತು 49 ಅಂಗನವಾಡಿ ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್​ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಕಾರ್ಯಕರ್ತೆ ಹುದ್ದೆಗೆ ಎಸ್ಸೆಸ್ಸಲ್ಸಿ ಹಾಗೂ ಸಹಾಯಕಿ ಹುದ್ದೆಗೆ ಕನಿಷ್ಠ 4 ನೇ ತರಗತಿ ಹಾಗೂ ಗರಿಷ್ಠ 9 ನೇ ತರಗತಿ ಪಾಸಾಗಿರಬೇಕು.

ವಯೋಮಿತಿ ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷ ಪೂರೈಸಿರಬೇಕು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜುಲೈ 31 ರೊಳಗಾಗಿ ಆನ್​ಲೈನ್ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ https://anganwadirecruit.kar.nic.in/ ಸಂಪರ್ಕಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net