ಎಫ್​ಟಿಐಐನಲ್ಲಿ ಬೋಧಕ ಹುದ್ದೆ ಭರ್ತಿಗೆ ಆನ್​ಲೈನ್ ಸಂದರ್ಶನ

Ftti
Published on

ಪುಣೆ: ಭಾರತೀಯ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆ (ಎಫ್​ಟಿಐಐ) ಯಲ್ಲಿ ಗುತ್ತಿಗೆ ಆಧಾರದ ಮೇಲೆ ಬೋಧಕ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿವಿಧ ವಿಭಾಗಗಳಲ್ಲಿ ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್ ಒಟ್ಟು 13 ಹುದ್ದೆಗಳಿವೆ.

ಗರಿಷ್ಠ ವಯೋಮಿತಿ 63 ವರ್ಷ ನಿಗದಿಪಡಿಸಲಾಗಿದೆ.

ಸೆಪ್ಟೆಂಬರ್ 9 ರವರೆಗೂ ಅರ್ಜಿ ಸಲ್ಲಿಸಲು ಅವಕಾಶವಿದೆ.  ಸೆಪ್ಟೆಂಬರ್ 24 ರಿಂದ 30 ರ ವರೆಗೆ ಆನ್​ಲೈನ್ ಸಂದರ್ಶನವಿರುತ್ತದೆ. ಹೆಚ್ಚಿನ ಮಾಹಿತಿಗೆ https://www.ftii.ac.in ನೋಡಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net