

ರಾಯಚೂರು: ಜಿಲ್ಲೆಯ ವಿವಿಧ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ವಿವಿಧ ಗ್ರಾಮಗಳಲ್ಲಿ/ ನಗರ ಪ್ರದೇಶಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಿರವಾರ, ಸಿಂಧನೂರು, ತುರ್ವಿಹಾಳ, ಲಿಂಗಸುಗೂರು, ದೇವದುರ್ಗ ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ಕಾರ್ಯಕರ್ತೆ ಹುದ್ದೆಗಳು ಹಾಗೂ ರಾಯಚುರು, ಗಿಲ್ಲೆಸುಗೂರು,ಮಾನವಿ, ಸಿರವಾರ, ಸಿಂಧನುರು, ತುರ್ವಿಹಾಳ, ಲಿಂಗಸುಗೂರು, ದೇವದುರ್ಗ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಸಹಾಯಕಿ ಹುದ್ದೆಗಳಿವೆ.
ವಿದ್ಯಾರ್ಹತೆ, ವಯೋಮಿತಿ ಇತ್ಯಾದಿ ವಿವರಗಳಿಗೆ ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಸಂಪರ್ಕಿಸಬಹುದು. ಜುಲೈ 30 ರೊಳಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಹೆಚ್ಚಿನ ಮಾಹಿತಿಗೆ https://anganwadirecruit.kar.nic.in