ಜ.1ರಿಂದ ಜೋಗ ಪ್ರವೇಶ ನಿಷೇಧ

ವಿಜಯವಾಣಿ (3)
Published on

ಶಿವಮೊಗ್ಗ: ಸಾಗರ ತಾಲೂಕಿನ ಜೋಗ ಜಲಪಾತ ವೀಕ್ಷಣೆಗೆ ಜಿಲ್ಲಾಡಳಿತ ಎರಡೂವರೆ ತಿಂಗಳ ಕಾಲ ನಿರ್ಬಂಧ ವಿಧಿಸಿದೆ.

ಜಲಪಾತದ ಮುಖ್ಯದ್ವಾರ ನಿರ್ಮಾಣ ಹಾಗೂ ಪ್ರವಾಸಿಗರಿಗೆ ಮೂಲಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಕಾಮಗಾರಿ ಅನುಷ್ಠಾನದ ಸಂದರ್ಭ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ತೊಂದರೆ ಆಗಬಾರದೆಂಬ ಕಾರಣಕ್ಕೆ 2025ರ ಜ.1ರಿಂದ ಮಾ.15ರವರೆಗೆ ಸಾರ್ವಜನಿಕರು ಮತ್ತು ಪ್ರವಾಸಿಗರನ್ನು ನಿರ್ಬಂಧಿಸಲಾಗಿದೆ.

ಹೆಚ್ಚಿನ ಮಾಹಿತಿಗೆ (ದೂ. 08182-251444) ಸಂಪರ್ಕಿಸಬಹುದು ಎಂದು ಜೋಗ ನಿರ್ವಹಣಾ ಪ್ರಾಧಿಕಾರದ ಸಿಇಒ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net