ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕೈಜೋಡಿಸಿ

ಬಾಗಲಕೋಟೆ ಜಿ.ಪಂ. ಸಭಾ ಭವನದಲ್ಲಿ ಬುಧವಾರ ಬಾಲ ಮತ್ತು ಕಿಶೋರ ಕಾರ್ಮಿಕರ ನಿಷೇಧ ಹಾಗೂ ನಿಯಂತ್ರಣ ಕಾಯ್ದೆಯ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಽÃಶರಾದ ಮಾಸ್ಟರ್ ಆರ್.ಕೆ.ಜಿ.ಎಂ.ಎA. ಮಹಾಸ್ವಾಮೀಜಿ ಉದ್ಘಾಟಿಸಿದರು. ಜಿಲ್ಲಾಽಕಾರಿ ಸಂಗಪ್ಪ, ಜಿಲ್ಲಾ ಕಾನೂನು ಸೇವಾ ಪ್ರಾಽಕಾರದ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ ಇತರರಿದ್ದರು.
ಬಾಗಲಕೋಟೆ ಜಿ.ಪಂ. ಸಭಾ ಭವನದಲ್ಲಿ ಬುಧವಾರ ಬಾಲ ಮತ್ತು ಕಿಶೋರ ಕಾರ್ಮಿಕರ ನಿಷೇಧ ಹಾಗೂ ನಿಯಂತ್ರಣ ಕಾಯ್ದೆಯ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಽÃಶರಾದ ಮಾಸ್ಟರ್ ಆರ್.ಕೆ.ಜಿ.ಎಂ.ಎA. ಮಹಾಸ್ವಾಮೀಜಿ ಉದ್ಘಾಟಿಸಿದರು. ಜಿಲ್ಲಾಽಕಾರಿ ಸಂಗಪ್ಪ, ಜಿಲ್ಲಾ ಕಾನೂನು ಸೇವಾ ಪ್ರಾಽಕಾರದ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ ಇತರರಿದ್ದರು.
Published on
ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕೈಜೋಡಿಸಿ
ಬಾಗಲಕೋಟೆ: ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸರ್ಕಾರದ ಪ್ರಯತ್ನ ಸಾಕಾಗುವುದಿಲ್ಲ. ಇದಕ್ಕೆ ವಿವಿಧ ಇಲಾಖೆಗಳು, ಅಽಕಾರಿಗಳು, ಸಂಘ, ಸಂಸ್ಥೆಗಳು, ಉದ್ಯಮಿಗಳು, ಪಾಲಕರು, ಸಾರ್ವಜನಿಕರು ಒಗ್ಗೂಡಿಕೊಂಡು ಕಾರ್ಯ ನಿರ್ವಹಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಽÃಶರಾದ ಮಾಸ್ಟರ್ ಆರ್.ಕೆ.ಜಿ.ಎಂ.ಎA. ಮಹಾಸ್ವಾಮೀಜಿ ಹೇಳಿದರು.
ಬಾಲ ಮತ್ತು ಕಿಶೋರ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಬಾಲ ಮತ್ತು ಕಿಶೋರ ಕಾರ್ಮಿಕರ ನಿಷೇಧ ಹಾಗೂ ನಿಯಂತ್ರಣ ಕಾಯ್ದೆ ಕುರಿತು ಜಿ.ಪಂ. ಸಭಾ ಭವನದಲ್ಲಿ ಬುಧವಾರ ಒಂದು ದಿನದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಬಾಲ ಕಾರ್ಮಿಕ ಪದ್ಧತಿ ಮಕ್ಕಳ ಶಿಕ್ಷಣ, ಆರೋಗ್ಯ ಹಾಗೂ ಭವಿಷ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಮಕ್ಕಳನ್ನು ದುಡಿಮೆಗೆ ಬಳಸದೆ, ಅವರಿಗೆ ಶಿಕ್ಷಣ ಪಡೆಯಲು ಹಾಗೂ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಅಗತ್ಯವಾದ ಅವಕಾಶ ಕಲ್ಪಿಸುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಬಾಲ ಕಾರ್ಮಿಕರು ಕಂಡು ಬಂದಲ್ಲಿ ಸಂಬAಽಸಿದ ಇಲಾಖೆಗಳ ಗಮನಕ್ಕೆ ತಂದು, ಮಕ್ಕಳನ್ನು ರಕ್ಷಿಸಿ ಶಿಕ್ಷಣದ ಮುಖ್ಯವಾಹಿನಿಗೆ ತರಲು ಕ್ರಮ ಕೈಗೊಳ್ಳಬೇಕು ಎಂದ ಅವರು, ಜಿಲ್ಲಾ ಕಾನೂನು ಸೇವಾ ಪ್ರಾಽಕಾರಿಂದ ದೊರೆಯಬಹುದಾದ ಉಚಿತ ಸೇವೆಗಳ ಬಗ್ಗೆ ಮಾಹಿತಿ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಽಕಾರಿ ಸಂಗಪ್ಪ ಮಾತನಾಡಿ, ಮಕ್ಕಳು ಬಾಲ್ಯದಲ್ಲಿ ಆಟ, ಪಾಠಗಳಲ್ಲಿ ತೊಡಗಿಕೊಳ್ಳಬೇಕು. ಆ ಬಾಲ್ಯವನ್ನು ಅನುಭವಿಸಲು ಬಿಡದೇ ಕೆಲಸಕ್ಕೆ ತೊಡಗಿಸಿಕೊಂಡರೆ ಮಗುವಿನ ಭವಿಷ್ಯ ಹಾಳಾಗುತ್ತದೆ. ಅದಕ್ಕಾಗಿ ಸರ್ಕಾರ ಬಾಲ ಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಜಾರಿಗೆ ತಂದಿದ್ದು, ಬಾಲ ಕಾರ್ಮಿಕ ಕಂಡು ಬಂದಲ್ಲಿ ಶಿಕ್ಷೆ ಹಾಗೂ ದಂಡಕ್ಕೆ ಗುರಿಪಡಿಸಲಾಗುತ್ತದೆ. ಕಾಯ್ದೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡುವ ಉದ್ದೇಶದಿಂದ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಅAತಾರಾಷ್ಟಿçÃಯ ಕಾರ್ಮಿಕ ಸಂಸ್ಥೆಯ ರಾಷ್ಟಿçÃಯ ಯೋಜನಾ ಸಮನ್ವಯಾಽಕಾರಿ ರಂಜೀತ ಪ್ರಕಾಶ ಅವರು ತರಬೇತಿ ಕಾರ್ಯಾಗಾರದಲ್ಲಿ ಬಾಲ ಮತ್ತು ಕಿಶೋರ ಕಾರ್ಮಿಕರ ನಿಷೇಧ ಹಾಗೂ ನಿಯಂತ್ರಣ ಕಾಯ್ದೆ ೧೯೮೬ ತಿದ್ದುಪಡಿ ಕಾಯ್ದೆ ೨೦೧೬ರ ಕುರಿತು ಪ್ರಮುಖ ಅಂಶಗಳು, ಬಾಲ ಕಾರ್ಮಿಕರನ್ನು ಗುರುತಿಸುವುದು, ರಕ್ಷಣೆ ಮತ್ತು ಪುನರ್ವಸತಿ ಕ್ರಮಗಳು, ವಿವಿಧ ಇಲಾಖೆಗಳ ಜವಾಬ್ದಾರಿಗಳು ಹಾಗೂ ಕಾಯ್ದೆಯಡಿ ಕೈಗೊಳ್ಳಬಹುದಾದ ಕಾನೂನು ಕ್ರಮಗಳ ಕುರಿತು ತಜ್ಞರಿಂದ ಮಾಹಿತಿ ನೀಡಿದರು.
ಜಿಲ್ಲಾ ಕಾನೂನು ಸೇವಾ ಪ್ರಾಽಕಾರದ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಬಸವರಾಜ ಗದ್ದಿ, ಕಾರ್ಯದರ್ಶಿ ಪ್ರಶಾಂತ ನಾರಾಯಣಕರ, ಜಿಲ್ಲಾ ಕಾರ್ಮಿಕ ಅಽಕಾರಿ ರಮೇಶ ಸುಂಬಡ, ತಹಶೀಲ್ದಾರ ವಾಸುದೇವ ಸ್ವಾಮಿ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಸ್ಥೆ ಯೋಜನಾ ನಿರ್ದೇಶಕ ಸುಧಾಕರ ಬಡಿಗೇರ ಸೇರಿ ಇತರರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net