

Naxals | ಛತ್ತೀಸ್ಗಢ ಹಾಗೂ ತೆಲಂಗಾಣ ಗಡಿಯಲ್ಲಿ ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಇಂದು (24) ನಡೆದ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳು ಮೂವರು ನಕ್ಸಲರನ್ನು ಹೊಡೆದುರುಳಿಸಿದ್ದಾರೆ. ಬಸ್ತಾರ್ ಪ್ರದೇಶದಲ್ಲಿ ಪ್ರಾರಂಭಿಸಲಾದ ನಕ್ಸಲ್ ವಿರೋಧಿ ಕಾರ್ಯಾಚರಣೆಯ ಭಾಗವಾಗಿ ಈ ನಕ್ಸಲರು ಹತರಾಗಿದ್ದಾರೆ, ಇದು ರಾಜ್ಯದಲ್ಲಿನ ಅತಿದೊಡ್ಡ ಕಾರ್ಯಾಚರಣೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎನ್ಕೌಂಟರ್ ಸ್ಥಳದಿಂದ ಇದುವರೆಗೆ ಮೂವರು ನಕ್ಸಲರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಂದಹಾಗೆ ಎನ್ಕೌಂಟರ್ನಲ್ಲಿ ಇತರ ಹಲವಾರು ಮಾವೋವಾದಿಗಳು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ.
ನಕ್ಸಲ್ ವಿರೋಧಿ ಕಾರ್ಯಾಚರಣೆಗಾಗಿ ವಿವಿಧ ಘಟಕಗಳಿಗೆ ಸೇರಿದ ಸುಮಾರು 10,000 ಭದ್ರತಾ ಸಿಬ್ಬಂದಿ ಇದರಲ್ಲಿ ಭಾಗಿಯಾಗಿದ್ದಾರೆ.
ಛತ್ತೀಸ್ಗಢದ ಬಿಜಾಪುರ ಜಿಲ್ಲೆಯ ಕರೇಗುಟ್ಟ ಬೆಟ್ಟಗಳ ಅರಣ್ಯದಲ್ಲಿ ಗುರುವಾರ ಬೆಳಗ್ಗೆ ಅಂತರರಾಜ್ಯ ಗಡಿಯಲ್ಲಿ ಭದ್ರತಾ ಪಡೆಗಳ ಜಂಟಿ ತಂಡ ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ ಗುಂಡಿನ ಚಕಮಕಿ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
(ಏಜೆನ್ಸೀಸ್)
ತೆಲಂಗಾಣದ ಸಿಆರ್ಪಿಎಫ್, ಡಿಆರ್ಜಿ, ಎಸ್ಟಿಎಫ್, ಕೋಬ್ರಾ ಮತ್ತು ಗ್ರೇ ಹೌಂಡ್ ಮತ್ತು ಮಹಾರಾಷ್ಟ್ರದ ಸಿ 60 ಒಳಗೊಂಡ ಸಂಯೋಜಿತ ಪಡೆ ಈ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ.
ಈ ಪ್ರಮುಖ ನಕ್ಸಲ್ ಕಾರ್ಯಾಚರಣೆಗಾಗಿ ತೆಲಂಗಾಣ ಮತ್ತು ಛತ್ತೀಸ್ಗಢ ಎರಡರಿಂದಲೂ ಹೆಚ್ಚಿನ ಸಂಖ್ಯೆಯ ಸೈನಿಕರನ್ನು ನಿಯೋಜಿಸಲಾಗಿದೆ. ಡ್ರೋನ್ಗಳ ಜೊತೆಗೆ, ಭದ್ರತಾ ಪಡೆಗಳು ಉಪಗ್ರಹಗಳ ಮೂಲಕ ನಕ್ಸಲ್ ಚಲನವಲನಗಳ ಮೇಲೆ ಕಣ್ಣಿಟ್ಟಿವೆ.