ಹಾಸನದಲ್ಲಿ ಏ.12, 13ಕ್ಕೆ ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

club.1p
Published on

ಬೆಂಗಳೂರು:

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ವು ಈ ಬಾರಿ ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಿಂದ ಇದೇ ಏ.12 ಮತ್ತು 13ರಂದು ಕ್ರಿಕೆಟ್ ಕ್ರೀಡಾಕೂಟವನ್ನು ಏರ್ಪಡಿಸಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ತಿಳಿಸಿದರು.

ಪ್ರೆಸ್ ಕ್ಲಬ್ನಲ್ಲಿ ಗುರುವಾರ ನಡೆದ ಸುದ್ದಿಗೋಷ್ಟಿಯಲ್ಲಿ ಕ್ರಿಕೆಟ್ ಪಂದ್ಯಾವಳಿಯ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದರು.

ಮಲೆನಾಡು, ಅರೆ ಮಲೆನಾಡು, ಬಯಲು ಸೀಮೆ ಸಮ್ಮಿಳನ ಹೊಂದಿರುವ ಹಾಸನ ಹೊಯ್ಸಳ ಶಿಲ್ಪಕಲೆಗೆ ತವರೂರು, ಗೊಮ್ಮಟನ ನೆಲೆಬೀಡಾಗಿದೆ. ಇದೇ ಮೊದಲ ಬಾರಿಗೆ ಹಾಸನದಲ್ಲಿ ರಾಜ್ಯ ಮಟ್ಟದ ಪತ್ರಕರ್ತರ ಕ್ರಿಕೆಟ್ ಕ್ರೀಡಾಕೂಟ ಏರ್ಪಡಿಸಲಾಗಿದೆ ಎಂದರು.

ಟೂರ್ನಮೆಂಟಿನಲ್ಲಿ ಪ್ರತಿ ಜಿಲ್ಲೆಯ ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದು, ಎರಡು ದಿನ ಹಾಸನದಲ್ಲಿ ಪತ್ರಕರ್ತರ ಕ್ರಿಕೆಟ್ ಕ್ರೀಡಾ ಹಬ್ಬ ನಡೆಯಲಿದ್ದು, ಅದಕ್ಕಾಗಿ ಅಂತಿಮ ಹಂತದ ಸಿದ್ಧತೆ ನಡೆಯುತ್ತಿದೆ ಎಂದರು.

ಸ್ಪೀಕರ್ ಯು.ಟಿ.ಖಾದರ್ ಅವರ ಘನ ಉಪಸ್ಥಿತಿಯಲ್ಲಿ ಸಹಕಾರ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್.ರಾಜಣ್ಣ ಈ ಪಂದ್ಯಾವಳಿ ಉದ್ಘಾಟನೆ ಮಾಡಲಿದ್ದಾರೆ. ಸಿಎಂ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಪಂದ್ಯಾವಳಿ ಬಗ್ಗೆ ಆಶಯ ನುಡಿಗಳನ್ನಾಡಲಿದ್ದಾರೆ.

ಪ್ರಸ್ತಾವಿಕವಾಗಿ ರಾಜ್ಯ ಸಮಿತಿ ಸದಸ್ಯ ಎಚ್.ಬಿ.ಮದನಗೌಡರು ಮಾತನಾಡಲಿದ್ದು, ಸಂಸದರಾದ ಶ್ರೇಯಸ್ ಪಟೇಲ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಲಿದ್ದಾರೆ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ವಹಿಸುವರು. ಹಾಸನ ಪತ್ರಕರ್ತರ ಸಂಘದ ಅಧ್ಯಕ್ಷ ರಾದ ವೇಣುಕುಮಾರ್ ಮತ್ತಿತರರು ಭಾಗವಹಿಸಲಿದ್ದಾರೆ.

ಸಮಾರೋಪ ಸಮಾರಂಭದಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಮತ್ತಿತರರು ಭಾಗವಹಿಸಲಿದ್ದಾರೆ. ಕ್ರೀಡಾಕೂಟಕ್ಕೆ ಹಾಸನ ಜಿಲ್ಲೆಯ ಎಲ್ಲ ಶಾಸಕರು, ಜಿಲ್ಲೆಯ ಎಲ್ಲ ವರ್ಗದ ಸರ್ಕಾರಿ ಅಧಿಕಾರಿಗಳು ಹಾಗೂ ಹಾಸನ ಕಾರ್ಯನಿರತ ಪತ್ರಕರ್ತರ ಸಂಘದ ಎಲ್ಲ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದ ಅವರು, ಈ ಎರಡು ದಿನಗಳ ಕ್ರೀಡಾಕೂಟ ಯಶಸ್ವಿಗೊಳಿಸಲು ಕರೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಹಿರಿಯ ಪತ್ರಕರ್ತರಾದ ಧ್ಯಾನ್ ಪೂಣಚ್ಚ, ಗಿರೀಶ್ ಗರಗ, ಭಾರತಿ ರಾಜನ್, ವಿಶ್ವನಾಥ್ ಸುವರ್ಣ ಅವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net