ಪತ್ರಕರ್ತ ಭುವನೇ೦ದ್ರ ಪುಡುವೆಟ್ಟು ನಿಧನ

IMG-20241119-WA0028
Published on

ಬೆಳ್ತಂಗಡಿ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಪತ್ರಕರ್ತ ಪುಡುವೆಟ್ಟು ನಿವಾಸಿ ಭುವನೇ೦ದ್ರ ಪುಡುವೆಟ್ಟು (೪೨) ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ಕೊನೆಯುಸಿರೆಳೆದಿದ್ದಾರೆ.

ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದರಿಂದ ಅವರನ್ನು ಮೂಡಬಿದ್ರೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ತಪಾಸಣೆ ವೇಳೆ ಪಿತ್ತಕೋಶದಲ್ಲಿ ಕಲ್ಲು ಇರುವುದರಿಂದ ಅಕ್ಯುಟ್ ಪ್ರಾಂಕಿಯಾಸಿಸ್ ಇರುವುದು ಗೊತ್ತಾಗಿತ್ತು. ತಕ್ಷಣ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ನ.೧೯ರಂದು ಕೊನೆಯುಸಿರೆಳೆದಿದ್ದಾರೆ.

ಕರಾವಳಿ ಅಲೆ, ವೆಬ್‌ದುನಿಯಾ, ಕಸ್ತೂರಿ ಚಾನೆಲ್, ವಿಜಯವಾಣಿ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸಿದ್ದ ಭುವನೇಂದ್ರ ಪುದುವೆಟ್ಟು ಅವರು ಕೆಲವು ಸಮಯಗಳಿಂದ ಬೆಳ್ತಂಗಡಿ ಸುದ್ದಿಬಿಡುಗಡೆ ಪತ್ರಿಕೆಯಲ್ಲಿ ಮುಖ್ಯ ವರದಿಗಾರರಾಗಿದ್ದರು. ಮೃತರು ತಂದೆ ನಾರಾಯಣ ಪೂಜಾರಿ, ತಾಯಿ ಮೋಹಿನಿ, ಪತ್ನಿ ಸುಜಾತ, ಈರ್ವರು ಪುಟ್ಟ ಮಕ್ಕಳು ಮತ್ತು ಸಹೋದರ ಯತೀಂದ್ರ ಅವರನ್ನು ಅಗಲಿದ್ದಾರೆ. ಭುವನೇಂದ್ರ ಅವರ ಪಾರ್ಥೀವ ಶರೀರವನ್ನು ನ.೧೯ರ ಮಧ್ಯಾಹ್ನ ಮಂಗಳೂರು ಆಸ್ಪತ್ರೆಯಿಂದ ಪುದುವೆಟ್ಟು ಮನೆಗೆ ಕರೆ ತಂದು ಅಂತಿಮ ವಿಧಿವಿಧಾನ ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net