

ಬೆಂಗಳೂರು: ವಾರ್ತಾ ಮತ್ತು ಸಂಪರ್ಕ ಇಲಾಖೆಯ ಅಧೀನದಲ್ಲಿರುವ ‘ಕರ್ನಾಟಕ ಮಾಧ್ಯಮ ಅಕಾಡೆಮಿ’ಯ ನೂತನ ಸದಸ್ಯರಾಗಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯುಜೆ) ಅಧ್ಯಕ್ಷ ಹಾಗೂ ಹಿರಿಯ ಪತ್ರಕರ್ತ ಶಿವಾನಂದ ತಗಡೂರು ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ.
ಈ ಕುರಿತು ಕರ್ನಾಟಕ ಸಚಿವಾಲಯದಿಂದ ಹೊರಡಿಸಲಾದ ಅಧಿಸೂಚನೆಯಲ್ಲಿ ಪತ್ರಿಕೆ ಹಾಗೂ ಮಾಧ್ಯಮಗಳಲ್ಲಿ ಕೆಲಸ ಮಾಡುತ್ತಿರುವ 11 ಜನ ಹಿರಿಯ ಪತ್ರಕರ್ತರು ಮತ್ತು ವರದಿಗಾರರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ವಿಜಯವಾಣಿ ದಿನಪತ್ರಿಕೆಯ ಹಿರಿಯ ವರದಿಗಾರ ಶಿವಾನಂದ ತಗಡೂರು ಅವರು ಹನ್ನೊಂದು ಸದಸ್ಯರ ಬಳಗದಲ್ಲಿದ್ದಾರೆ.
ಜೊತೆಗೆ, ಎರಡು ಪತ್ರಿಕೋದ್ಯಮ ಕಾಲೇಜುಗಳ ಮುಖ್ಯಸ್ಥರನ್ನು ಪದನಿಮಿತ್ತ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಮುಂದಿನ ಆದೇಶದವರೆಗೂ ಈ ಸದಸ್ಯರು ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಕಾರ್ಯ ನಿರ್ವಹಿಸಲಿದ್ದಾರೆ.
ಮೈಸೂರು ಮಾನಸ ಗಂಗೋತ್ರಿ ಕಾಲೇಜು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರು ಮಂಗಳೂರು ಮಂಗಳ ಗಂಗೋತ್ರಿ ಕಾಲೇಜು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರು