

ಹಾವೇರಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಹಾವೇರಿ ಜಿಲ್ಲಾ ಘಟಕದ 2025&-28ನೇ ಅವಧಿಯ ಆಡಳಿತ ಮಂಡಳಿ ಆಯ್ಕೆಗಾಗಿ ನ. 9ರಂದು ಚುನಾವಣೆ ನಡೆಯಲಿದೆ ಜಿಲ್ಲಾ ಚುನಾವಣಾಧಿಕಾರಿ, ಸಹಕಾರ ಇಲಾಖೆಯ ಸಹಾಯಕ ನಿಬಂಧಕ ವಿಕ್ರಮ ಜಿ. ಕುಲಕಣಿರ್ ತಿಳಿಸಿದ್ದಾರೆ.
ಅ. 13ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುವುದು. ಅಂದೇ ವೇಳಾಪಟ್ಟಿ ಪ್ರಕಟಗೊಳ್ಳಲಿದ್ದು, ಮತದಾರರ ಕರಡು ಪ್ರತಿ ಪ್ರಕಟವಾಗಲಿದೆ. ಅ. 19ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಅ. 27ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅ.28 ನಾಮಪತ್ರಗಳ ಪರಿಶೀಲನೆ, ಅ. 30 ನಾಮಪತ್ರಗಳನ್ನು ಹಿಂತೆಗೆದುಕೊಳ್ಳುವ ಕೊನೆಯ ದಿನವಾಗಿರುತ್ತದೆ. ನ. 9ರಂದು ವಿದ್ಯಾನಗರದಲ್ಲಿರುವ ಜಿಲ್ಲಾ ಪತ್ರಿಕಾ ಭವನದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 3ಗಂಟೆ ವರೆಗೆ ಮತದಾನ ನಡೆಯಲಿದೆ. ಮತದಾನ ಬಳಿಕ ಅದೇ ದಿನ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ.