

ಸೋಮವಾರಪೇಟೆ : ತಾಲೂಕು ಪತ್ರಕರ್ತರ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ಪತ್ರಕರ್ತರ ಕುಟುಂಬದ ಸಮ್ಮಿಲನ ಕಾರ್ಯಕ್ರಮ ಮೇ 25ರಂದು ಪತ್ರಿಕಾ ಭವನದಲ್ಲಿ ನಡೆಯಲಿದೆ ಎಂದು ಹರೀಶ್ ಕುಮಾರ್ ಹೇಳಿದರು.
ಪತ್ರಿಕಾಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಕೊಡಗು ಪತ್ರಕರ್ತರ ಸಂಘದ ತಾಲೂಕು ಘಟಕದ ಸಭೆಯಲ್ಲಿ ಮಾತನಾಡಿದ ಅವರು, ಜೂ. 21ರಂದು ಶನಿವಾರಸಂತೆಯ ಭಾರತಿ ವಿದ್ಯಾಸಂಸ್ಥೆಯಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ, ತಾಲೂಕು ಪತ್ರಕರ್ತರ ಸಂಘ, ಕಳಲೆ ಬಿಜಿಎಸ್ ಸೇವಾ ಸಂಸ್ಥೆ ಹಾಗೂ ಭಾರತಿ ವಿದ್ಯಾಸಂಸ್ಥೆಯ ಸಹಯೋಗದಲ್ಲಿ ಐಎಎಸ್, ಐಪಿಎಸ್ ಹಾಗೂ ಬ್ಯಾಂಕಿಂಗ್ ಪರೀಕ್ಷೆ ಎದುರಿಸುವುದು ಹಾಗೂ ಸಿದ್ಧತೆ ಬಗ್ಗೆ ಕಾಲೇಜು ವಿದ್ಯಾರ್ಥಿಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರ ನಡೆಸಲು ಸಭೆ ತೀರ್ಮಾನಿಸಿತು. ಐಎಎಸ್, ಐಪಿಎಸ್ ಅಧಿಕಾರಿಗಳು ಹಾಗೂ ಬೆಂಗಳೂರಿನ ಫೌಂಡರ್ ಆ್ಯಂಡ್ ಸಿಇಒ ಇಂಡಿಯಾ ಅಕಾಡೆಮಿ ತರಬೇತಿ ಕಾರ್ಯಾಗಾರ ನಡೆಸಿಕೊಡಲಿದ್ದಾರೆ.
ಕೊಡಗು ಪತ್ರಕರ್ತರ ಸಂಘದ ಜಿಲ್ಲಾ ಉಪಾಧ್ಯಕ್ಷ ತೇಲಪಂಡ ಕವನ್ ಕಾರ್ಯಪ್ಪ, ಉಪಾಧ್ಯಕ್ಷ ಎಸ್.ಎ. ಮುರಳೀಧರ್, ಪ್ರಧಾನ ಕಾರ್ಯದರ್ಶಿ ಡಿ.ಪಿ. ಲೋಕೇಶ್, ಖಜಾಂಚಿ ದುಷ್ಯಂತ್‌ಕುಮಾರ್, ನಿರ್ದೇಶಕರಾದ, ಕೆ.ಎನ್. ತೋಮಸ್, ಹೊಮೇಶ್ ಮಣಗಲಿ ಇದ್ದರು.