

ಬೆಂಗಳೂರು: ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಯಾಗಿ 10 ತಿಂಗಳು ಕಳೆದಿದ್ದು, ಏಪ್ರಿಲ್ ಅಂತ್ಯದವರೆಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಬಸ್‌ನಲ್ಲಿ ಬರೊಬ್ಬರಿ 200 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ.
ರಾಜ್ಯ ಸರ್ಕಾರ ೨೦೨೩ರ ಜೂ. ೧೧ರಿಂದ ಶಕ್ತಿ ಯೋಜನೆ ಆರಂಭಿಸಿತು. ಈ ಶಕ್ತಿ ಯೋಜನೆ ಅಡಿಯಲ್ಲಿ ಮಹಿಳೆಯರು ರಾಜ್ಯ ಸಾರಿಗೆ ಸಂಸ್ಥೆಯ ನಾಲ್ಕು ನಿಗಮ ಕೆಎಸ್‌ಆರ್‌ಟಿಸಿ, ಎನ್‌ಡಬ್ಲೂಕೆಆರ್‌ಟಿಸಿ, ಬಿಎಂಟಿಸಿ, ಕೆಕೆಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರು ಪ್ರಯಾಣಕ್ಕೆ ೪,೯೦೦ ಕೋಟಿ ವೆಚ್ಚವಾಗಿದೆ.
ಶಕ್ತಿ ಯೋಜನೆ ಜಾರಿಯಾದಾಗಿನಿಂದ ಏಪ್ರಿಲ್ ಅಂತ್ಯದವರೆಗೆ ಒಟ್ಟು ೩೪೮.೯೭ ಕೋಟಿ ಜನರು ಪ್ರಯಾಣಿಸಿದ್ದರು. ಇದರಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆಯೇ ಹೆಚ್ಚಿದೆ. ಈವರೆಗೆ ಒಟ್ಟು ೪,೮೩೬ ಕೋಟಿ ರೂ. ಮೌಲ್ಯದ ಉಚಿತ ಟಿಕೆಟ್‌ಗಳನ್ನು ನೀಡಲಾಗಿದೆ. ಶಕ್ತಿ ಯೋಜನೆ ಜಾರಿಯಾದಾಗಿನಿಂದ ನವೆಂಬರ್ ಅಂತ್ಯದ ವೇಳೆಗೆ ೧೦೦ ಕೋಟಿ ಮಹಿಳೆಯರು ಪ್ರಯಾಣಿಸಿದ್ದರು. ಇದೀಗ ಈ ಸಂಖ್ಯೆ ೨೦೦ ಕೋಟಿಗೆ ಮುಟ್ಟಿದೆ. ಬಿಸಿಲು ಮತ್ತು ಚುನಾವಣೆ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಂಖ್ಯೆ ಸ್ವಲ್ಪ ಕಡಿಮೆಯಾಗಿದೆ.
ನಾಲ್ಕು ನಿಗಮಗಳ ಪೈಕಿ ಬಿಎಂಟಿಸಿ ಬಸ್‌ಗಳಲ್ಲೇ ಅತಿ ಹೆಚ್ಚು ಜನರು ಪ್ರಯಾಣಿಸಿದ್ದಾರೆ. ಯೋಜನೆ ಜಾರಿಯಾದಾಗಿನಿಂದ ಮೇ ೫ ರವರೆಗೆ ೬೪ ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ. ಒಟ್ಟು ೮೪೨ ಕೋಟಿ ರೂ. ಮೌಲ್ಯದ ಟಿಕೆಟ್ ನೀಡಲಾಗಿದೆ. ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ೬೧.೦೩ ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ. ಒಟ್ಟು ೧,೮೪೪ ಕೋಟಿ ರೂ. ಮೌಲ್ಯದ ಟಿಕೆಟ್ ನೀಡಲಾಗಿದೆ.
ಎನ್‌ಡಬ್ಲೂಕೆಆರ್‌ಟಿಸಿ ಬಸ್‌ನಲ್ಲಿ ೪೭.೨ ಕೋಟಿ ಮಹಿಳೆಯರು ಪ್ರಯಾಣಿಸಿದ್ದು, ೧,೮೪೪ ಕೋಟಿ ರೂ. ಮೌಲ್ಯದ ಟಿಕೆಟ್ ನೀಡಲಾಗಿದೆ. ಕೆಕೆಆರ್‌ಟಿಸಿ ಬಸ್‌ಗಳಲ್ಲಿ ೩೦ ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ. ೧೦೦೦ ಕೋಟಿ ರೂ. ಮೌಲ್ಯದ ಟಿಕೆಟ್ ನೀಡಲಾಗಿದೆ.
ಕಳೆದ ನಾಲ್ಕು ವರ್ಷಗಳಲ್ಲಿ ಯಾವುದೇ ಹೊಸ ಬಸ್‌ಗಳು ಸೇರ್ಪಡೆಯಾಗದ ಕಾರಣ, ಬಸ್‌ಗಳ ಕೊರತೆಯು ಆಗಾಗ್ಗೆ ಕೇಳಿಬರುವ ದೂರು ಮತ್ತು ನಿಗಮಗಳಿಗೆ ಸವಾಲಾಗಿದೆ. ಗ್ರಾಮೀಣ ಭಾಗದಲ್ಲಿ ನಿಗದಿತ ಸಂಖ್ಯೆಯ ಬಸ್‌ಗಳನ್ನು ಓಡಿಸದ ಅಧಿಕಾರಿಗಳು ವಿದ್ಯಾರ್ಥಿಗಳ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ೧,೦೦೦ ಸಾಮಾನ್ಯ ಬಸ್‌ಗಳನ್ನು ಸೇರ್ಪಡೆಗೊಳಿಸಲು ಯುಟಿಲಿಟಿ ಕ್ರಮ ಕೈಗೊಂಡಿದ್ದು, ಅವುಗಳಲ್ಲಿ ೪೫೦ ಈಗಾಗಲೇ ಸೇರ್ಪಡೆಗೊಂಡಿವೆ.