ಜೂ. 5ರಿಂದ 22ರವರೆಗೆ ಮೋದಿ ಆಡಳಿತ ಸಂಭ್ರಮಾಚರಣೆ

ದ.ಕ. ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಜೂ. 5ರಿಂದ 22ರವರೆಗೆ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದರು.
ದ.ಕ. ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಜೂ. 5ರಿಂದ 22ರವರೆಗೆ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದರು.
Published on
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ 4,394 ದಿನಗಳ ನಿರಂತರ ಆಡಳಿತ ಹಾಗೂ 12ನೇ ವರ್ಷದ ಸಂಭ್ರಮಾಚರಣೆ ದೇಶಾದ್ಯಂತ ನಡೆಯುತ್ತಿದ್ದು, ಅದರಂತೆ ದ.ಕ. ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಜೂ. 5ರಿಂದ 22ರವರೆಗೆ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಸರ್ಕಾರದ ಸಾಧನೆ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ವರ್ಚಸ್ಸನ್ನು ಜನತೆ ಬಳಿಗೆ ತಲುಪಿಸುವುದು ವಿಶ್ವಾಸ, ಅಭಿವೃದ್ಧಿ ಮತ್ತು ಜನ ಕಲ್ಯಾಣದ 12 ವರ್ಷಗಳು ಅಭಿಯಾನದ ಉದ್ದೇಶ. ಬಿಜೆಪಿ ಸಂಸದರು, ಶಾಸಕರು, ಇತರೆ ಜನಪ್ರತಿನಿಧಿಗಳು, ಮುಖಂಡರು, ಕಾರ್ಯಕರ್ತರ ವಿವಿಧ ತಂಡಗಳಲ್ಲಿ ಜಿಲ್ಲೆ, ತಾಲೂಕು, ವಿಧಾನಸಭಾ ಕ್ಷೇತ್ರ, ಶಕ್ತಿ ಕೇಂದ್ರ, ಮಹಾಶಕ್ತಿ ಕೇಂದ್ರ ಹಾಗೂ 1,876 ಬೂತ್‌ಗಳಲ್ಲಿ ಮೋದಿ ಸಾಧನೆ, ಜನಜಾಗೃತಿ ಹಾಗೂ ಸಂವಾದ ಕಾರ್ಯಕ್ರಮ ನಡೆಸಲಾಗುವುದು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬಿಜೆಪಿ ಮಹಿಳಾ ಮೋರ್ಚಾದಿಂದ ಶಕ್ತಿನಗರದ ನಾಲ್ಯಪದವು ಶಾಲೆಯಲ್ಲಿ ಸಸಿ ನೆಡುವ ಮೂಲಕ ಶುಕ್ರವಾರ ಪರಿಸರ ದಿನಾಚರಣೆ ಆಚರಿಸಲಾಗಿದೆ. ಈ ಕಾರ್ಯಕ್ರಮ ಇಡೀ ಜಿಲ್ಲೆಯಲ್ಲಿ ನಡೆಯಲಿದೆ. ಜಿಲ್ಲೆಯಲ್ಲಿ 1876 ಬೂತ್‌ಗಳಿದ್ದು, ಪ್ರತಿ ಬೂತ್‌ನಲ್ಲಿ ಕನಿಷ್ಠ ಒಂದು ಗಿಡ ನೆಡಲಾಗುವುದು. ಗರಿಷ್ಠ ಎಷ್ಟು ಗಿಡಗಳನ್ನೂ ನೆಡಬಹುದು. ಈ ಮೂಲಕ ಪರಿಸರ ರಕ್ಷಣೆ ಹಾಗೂ ಪೋಷಣೆಗೆ ಆದ್ಯತೆ ನೀಡಲಾಗುವುದು ಎಂದರು.
ಆಯುಷ್ಮಾನ್ ನೋಂದಣಿ ಅಭಿಯಾನ, ರೈತ ಮೋರ್ಚಾದಿಂದ ಸಾವಯವ ಕೃಷಿ ಅರಿವು, ಕಿಸಾನ್ ಸಮ್ಮಾನ್ ರೈತ ಲಾನುಭವಿಗಳ ನೋಂದಣಿ, ಬಿಜೆಪಿ ಹಿಂದುಳಿದ ವರ್ಗ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ, ಪರಶಿಷ್ಟ ಜಾತಿ, ವರ್ಗದ ಕಾಲನಿಗಳಲ್ಲಿ ಸ್ವಚ್ಛತೆ ನಡೆಸಲಾಗುವುದು. ಸಮಾಜದ ಎಲ್ಲ ಸ್ತರದ ಮಂದಿಯ ಸಂಪರ್ಕ, ಜಿಲ್ಲೆ, ಮಂಡಲಗಳಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಲಾನುಭವಿಗಳ ಸಮಾವೇಶ, ಕನಿಷ್ಠ 500 ಮಂದಿಗೆ ಗೌರವಿಸಲು ಉದ್ದೇಶಿಸಲಾಗಿದೆ ಎಂದರು.
ಸಂಘ ಸಂಸ್ಥೆಗಳ ಸಹಯೋಗದಲ್ಲಿ ಯುವ ಮೋರ್ಚಾ ಆರೋಗ್ಯ, ರಕ್ತದಾನ ಶಿಬಿರ ನಡೆಸಲಿದೆ. ಜೂ. 21 ರಂದು ವಿಶ್ವ ಯೋಗ ದಿನಾಚರಣೆ ಬೂತ್ ಹಾಗೂ ಶಕ್ತಿ ಕೇಂದ್ರ ಮಟ್ಟದಲ್ಲಿ ನಡೆಯಲಿದೆ. ಈ ಎಲ್ಲ ಕಾರ್ಯಕ್ರಮಗಳ ಮೂಲಕ ಕೇಂದ್ರ ಸರಕಾರದ ಯೋಜನೆ, ಸಾಧನೆಗಳನ್ನು ಜನಮನಕ್ಕೆ ತಲುಪಿಸಲಾಗುವುದು. ಶುಕ್ರವಾರದಿಂದ ಜೂ.22ರವರೆಗೆ ವಿವಿಧ ಕಾರ್ಯಕ್ರಮಗಳ ಮೂಲಕ ಮೋದಿ ಸರಕಾರದ ಸಾಧನೆಗಳನ್ನು ಜನತೆಗೆ ತಿಳಿಸಲಾಗುವುದು ಎಂದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಯತೀಶ್ ಆರ್ವಾರ್, ಪ್ರೇಮಾನಂದ ಶೆಟ್ಟಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಡಾ. ಮಂಜುಳಾ ರಾವ್, ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಎಸ್‌ಟಿ ಮೋರ್ಚಾ ಜಿಲ್ಲಾಧ್ಯಕ್ಷೆ ಸುಮಿತ್ರಾ ಕರಿಯ, ಜಿಲ್ಲಾ ಕಾರ್ಯದರ್ಶಿಗಳಾದ ದೇವಪ್ಪ ಪೂಜಾರಿ, ಧನಲಕ್ಷ್ಮೀ ಗಟ್ಟಿ, ಸುಜಿತ್ ಪ್ರತಾಪ್, ಪ್ರಮುಖರಾದ ಅರುಣ್ ಶೇಟ್, ಸಂಜಯ ಪ್ರಭು, ವಸಂತ ಪೂಜಾರಿ, ಮನೋಹರ ಶೆಟ್ಟಿ, ಸಂಧ್ಯಾ ವೆಂಕಟೇಶ್, ಲಖಿತಾ ಶೆಟ್ಟಿ, ಉಮೇಶ್ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.
--------------------
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net